ಭಾನುವಾರ, ಸೆಪ್ಟೆಂಬರ್ 26, 2021
29 °C

ಮಧುಗಿರಿ ಜಿಲ್ಲೆಯಾಗಲಿ: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ದೇಶ ವಿವಿಧ ಕ್ಷೇತ್ರಗಳಲ್ಲಿ ಅದ್ಭುತ ಸಾಧನೆ ಮಾಡುತ್ತಿದೆ ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಹೇಳಿದರು.

ಪಟ್ಟಣದ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗೌರವ ವಂದನೆ ಸ್ವೀಕರಿಸಿ ಮಾತನಾಡಿದರು.

ಪರಮಾಣು ಶಕ್ತಿ ಹೊಂದಿರುವ ಕೆಲವೇ ರಾಷ್ಟ್ರಗಳಲ್ಲಿ ಭಾರತವು ಒಂದಾಗಿರುವುದು ಸಂತಸ. ಜಗತ್ತಿನ ಹತ್ತಕ್ಕೂ ಹೆಚ್ಚು ರಾಷ್ಟ್ರಗಳು ಕೋವಿಡ್‌ ಲಸಿಕೆಗಳಿಗಾಗಿ ಭಾರತವನ್ನು ಎದುರು ನೋಡುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ, ಮಧುಗಿರಿಯನ್ನು ಕಂದಾಯ ಜಿಲ್ಲೆಯನ್ನಾಗಿ ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಈವರೆಗೆ ಅದು ಸಾಕಾರಗೊಂಡಿಲ್ಲ. ನೂತನ ಮುಖ್ಯಮಂತ್ರಿಗೆ ಮನವಿ ಮಾಡಿ ಸದನದಲ್ಲಿ ಧ್ವನಿ ಎತ್ತಲಾಗುವುದು ಎಂದರು.‌

ಬರ ಪೀಡಿತ ಪ್ರದೇಶದ ಕಡೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು. ಎತ್ತಿನ ಹೊಳೆ ಯೋಜನೆಯ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ಕಾಮಗಾರಿಗೆ ವೇಗ ನೀಡಬೇಕು ಎಂದು ಒತ್ತಾಯಿಸಿದರು.

ಪುರಸಭೆ ಅಧ್ಯಕ್ಷ ತಿಮ್ಮರಾಜು, ಡಿವೈಎಸ್‌ಪಿ ಕೆ.ಜಿ.ರಾಮಕೃಷ್ಣ, ತಹಶೀಲ್ದಾರ್ ವೈ.ರವಿ, ತಾ.ಪಂ.ಇಒ ಡಿ.ದೊಡ್ಡಸಿದ್ದಪ್ಪ, ಡಿಡಿಪಿಐ ಕೃಷ್ಣಮೂರ್ತಿ, ಸಿಡಿಪಿಒ ಅನಿತಾ, ಬಿಇಒ ನಂಜುಂಡಯ್ಯ, ಉಪನ್ಯಾಸಕ ನಾಗಪ್ಪ, ಪುರಸಭೆ ಸದಸ್ಯರಾದ ಎಂ.ಎಸ್.ಚಂದ್ರಶೇಖರ್ ಬಾಬು, ಎಂ.ಎಸ್‌.ಚಂದ್ರಶೇಖರ್, ಎಂ.ಎಲ್.ಗಂಗರಾಜು, ಎಂ.ಆರ್.ಜಗನ್ನಾಥ್, ಕೆ.ನಾರಾಯಣ, ನರಸಿಂಹಮೂರ್ತಿ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಎಚ್.ವೆಂಕಟೇಶ್, ಗಾಯಕ ಕಂಬದ ರಂಗಯ್ಯ, ಕಸಾಪ ಅಧ್ಯಕ್ಷ ಚಿ.ಸೂ.ಕೃಷ್ಣಮೂರ್ತಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು