ತುಮಕೂರು: ವಚನ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ಪರಮೇಶ್ ಹೇಳಿದರು.

ನಗರದಲ್ಲಿ ಬುಧವಾರ ಜಿಲ್ಲಾ ಆಡಳಿತ, ಕನ್ನಡ ಸಾಹಿತ್ಯ ಪರಿಷತ್ತು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ, ನಗರ ವೀರಶೈವ ಸಮಾಜ ಸೇವಾ ಸಮಿತಿ, ಶರಣ ಸಾಹಿತ್ಯ ಪರಿಷತ್, ಬಸವ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಫ.ಗು.ಹಳಕಟ್ಟಿ ಜನ್ಮ ದಿನ, ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಳಕಟ್ಟಿ ವಚನ ಸಾಹಿತ್ಯ ಮುದ್ರಣಕ್ಕಾಗಿ ಮನೆಯನ್ನು ಮಾರಾಟ ಮಾಡಿದ್ದರು. ಬದುಕಿನ ಕೊನೆಯ ತನಕ ಬಾಡಿಗೆ ಮನೆಯಲ್ಲಿ ವಾಸವಿದ್ದರು. ನಾವು ವಚನ ಬರೆಯಬೇಕಿಲ್ಲ. ಇವರ ವಚನ ಓದಿ, ಅರ್ಥೈಸಿಕೊಂಡು ಅದರಂತೆ ನಡೆದರೆ ಜನ್ಮ ಸಾರ್ಥಕ ಎಂದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ, ‘ಹರಿದು, ಹಂಚಿ ಹೋಗಿದ್ದ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ, ಮುದ್ರಿಸಿ, ಪ್ರಚುರಪಡಿಸುವ ಮೂಲಕ ಸಾಹಿತ್ಯದ ಅಮೂಲ್ಯ ಪ್ರಕಾರ ಉಳಿಸಿ, ಬೆಳೆಸಿದ ಕೀರ್ತಿ ಹಳಕಟ್ಟಿ ಅವರಿಗೆ ಸಲ್ಲುತ್ತದೆ’ ಎಂದು ಸ್ಮರಿಸಿದರು.

ಸಂಶೋಧಕ ಬಿ.ನಂಜುಂಡಸ್ವಾಮಿ, ಶಂಕರಗೌಡ ಬಿರಾದರ, ಗಂಗಾಧರ ಕೊಡ್ಲಿ ಅವರನ್ನು ಸನ್ಮಾನಿಸಲಾಯಿತು. ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಜಿ.ಸಿದ್ಧರಾಮಯ್ಯ, ಬಸವ ಕೇಂದ್ರದ ಅಧ್ಯಕ್ಷೆ ಸಿದ್ಧಗಂಗಮ್ಮ, ಇತಿಹಾಸಕಾರ ಡಿ.ಎನ್.ಯೋಗೀಶ್ವರಪ್ಪ, ಮುಖಂಡರಾದ ಕೆ.ಎಸ್.ಉಮಾಮಹೇಶ್, ರುದ್ರಮೂರ್ತಿ ಎಲೆರಾಮಪುಂ, ಶಿವಗಂಗಮ್ಮ, ಅಕ್ಕನಾಗಮ್ಮ, ಶೈಲಾ ಶಿವಕುಮಾರ್, ಚಿಕ್ಕಬೆಳ್ಳಾವಿ ಶಿವಕುಮಾರ್, ಬಿ.ರಾಜಶೇಖರಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಸಹಾಯಕ ನಿರ್ದೇಶಕ ಸುರೇಶಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.