ಬುಧವಾರ, ಸೆಪ್ಟೆಂಬರ್ 18, 2019
26 °C

ಕಾರ್ಮಿಕರು ಸರ್ಕಾರದ ಸೌಲಭ್ಯ ಪಡೆಯಲಿ

Published:
Updated:
Prajavani

ತುಮಕೂರು: ಜಿಲ್ಲೆಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ತಮ್ಮ ಹೆಸರು ನೋಂದಣಿ ಮಾಡಿಸಿಕೊಂಡು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಫಲಾನುಭವಿಗಳಿಗೆ ಮದುವೆ ಧನಸಹಾಯ ಹಾಗೂ ಶೈಕ್ಷಣಿಕ ಧನ ಸಹಾಯದ ಮಂಜೂರಾತಿ ಆದೇಶದ ಪ್ರತಿ ವಿತರಿಸಿ ಮಾತನಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಕಾರ್ಮಿಕ ಅಧಿಕಾರಿ ಸುಭಾಷ್ ಎಂ.ಆಲದಕಟ್ಟಿ ಮತ್ತಿತರರು ಇದ್ದರು.

Post Comments (+)