ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬಿಸಿಗೆ ಸೇರಿಸಲು ಒತ್ತಾಯಿಸಿ ಕುಂಚಿಟಿಗರಿಂದ ಪತ್ರ ಚಳವಳಿ

Last Updated 21 ಫೆಬ್ರುವರಿ 2021, 4:33 IST
ಅಕ್ಷರ ಗಾತ್ರ

ತುಮಕೂರು: ಕೇಂದ್ರದ ಇತರೆ ಹಿಂದುಳಿದ ವರ್ಗ (ಒಬಿಸಿ) ಪಟ್ಟಿಗೆ ಕುಂಚಿಟಿಗರನ್ನು ಸೇರಿಸುವಂತೆ ಒತ್ತಾಯಿಸಿ ಸಮುದಾಯದ ವಿದ್ಯಾರ್ಥಿನಿಯರು ಪತ್ರ ಚಳವಳಿ ಆರಂಭಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಿ ಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು. ಕುಂಚಿಟಿಗ ವಿದ್ಯಾರ್ಥಿನಿಯರ ಪತ್ರ ಚಳವಳಿಗೆ ರಾಜ್ಯ ಕುಂಚಿಟಿಗ ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಮಲ್ಲಪ್ಪ ಚಾಲನೆ ನೀಡಿದರು.

ಕುಂಚಿಟಿಗ ಜನಾಂಗವು ಕೇಂದ್ರ ಹಿಂದುಳಿದ ವರ್ಗಗಳ ಪಟ್ಟಿಯಿಂದ ಬಿಟ್ಟು ಹೋಗಿದೆ. ಸೇರ್ಪಡೆ ಮಾಡುವಂತೆ ಒತ್ತಾಯಿಸಿ ಸಂಘಟನೆಗಳು, ಮಠಾಧೀಶರು, ಜನಾಂಗದ ಮುಖಂಡರು ಹೋರಾಟ ನಡೆಸಿದ್ದರು. ಇದರ ಫಲವಾಗಿ ರಾಜ್ಯ ಸರ್ಕಾರವು ಮೈಸೂರು ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕುಲಶಾಸ್ತ್ರ ಅಧ್ಯಯನ ಮಾಡಿದ್ದು, ವರದಿಯನ್ನು ಅಂಗೀಕರಿಸಿದೆ. ಈ ವರದಿ ಆಧಾರದ ಮೇಲೆ ಒಬಿಸಿ ಪಟ್ಟಿಗೆ ಸೇರಿಸುವಂತೆ ಶಿಫಾರಸು ಮಾಡಿದೆ ಎಂದು
ಹೇಳಿದರು.

ರಾಜ್ಯ ಸರ್ಕಾರ ಕಳುಹಿಸಿರುವ ಶಿಫಾರಸ್ಸನ್ನು ಕೇಂದ್ರ ಸಚಿವ ಸಂಪುಟದ ಮುಂದೆ ತಂದು ಅಂಗೀಕರಿಸಿ, ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT