ತುಮಕೂರು: 13 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣವಾದ ಅಪರಾಧಿ ಶ್ರೀನಿವಾಸ್ಗೆ (40) ಪೋಕ್ಸೊ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹1.05 ಲಕ್ಷ ದಂಡ ವಿಧಿಸಿದೆ.

2022ರ ಮೇ ತಿಂಗಳಿನಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಮನೆಗೆ ನುಗ್ಗಿದ ಶ್ರೀನಿವಾಸ್ ಬಲವಂತವಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ. ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದ. ನಂತರ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಕೋಳಾಲ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಿಸಲಾಗಿತ್ತು.

ತನಿಖಾಧಿಖಾರಿ ಕೆ.ಸುರೇಶ್ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ಸಮಯದಲ್ಲಿ ಆರೋಪ ಸಾಬೀತಾದ ಹಿನ್ನೆಲೆ ಅಪರಾಧಿಗೆ ಶಿಕ್ಷೆ ವಿಧಿಸಲಾಗಿದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಬಾಲಕಿಗೆ ₹10 ಲಕ್ಷ ಪರಿಹಾರ ನೀಡುವಂತೆ ನ್ಯಾಯಾಲಯ ಸೂಚಿಸಿದೆ. ಸದರಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಕೆ.ಎಸ್.ಆಶಾ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.