ತುಮಕೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಮೂರನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಮಠದಲ್ಲಿ ಶುಕ್ರವಾರ ಕೋವಿಡ್‌ನಿಂದಾಗಿ ಸರಳವಾಗಿ ಆಚರಿಸಲಾಗುತ್ತಿದೆ.

ಸ್ವಾಮೀಜಿ ಸ್ಮರಣಾರ್ಥ ಫೆ. 21ರಂದು ದಾಸೋಹ ದಿನ ಆಚರಿಸಲು ಸರ್ಕಾರ ನಿರ್ಧರಿಸಿತ್ತು. ಈ ವರ್ಷ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಿತ್ತು. ಆದರೆ, ಕೋವಿಡ್ ತೀವ್ರ ಸ್ವರೂಪ ಪಡೆದುಕೊಂಡಿರುವುದರಿಂದ ಯಾವುದೇ ಆಚರಣೆಗಳು ಇಲ್ಲವಾಗಿವೆ.

ಮಠದಲ್ಲಿ ಅತ್ಯಂತ ಸರಳವಾಗಿ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಗದ್ದುಗೆ ಪೂಜೆ ಹೊರತುಪಡಿಸಿ ಬೇರೆ ಯಾವುದೇ ಕಾರ್ಯಕ್ರಮಗಳು ಇರುವುದಿಲ್ಲ. ಉತ್ಸವ, ಮೆರವಣಿಗೆ, ವೇದಿಕೆ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಕಾರ್ಯಕ್ರಮ ಮಾಡಿದರೆ ಮಠದ ವಿದ್ಯಾರ್ಥಿಗಳು, ಭಕ್ತಾದಿಗಳು ಸೇರುತ್ತಾರೆ. ಇದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಹಾಗಾಗಿ, ಎಲ್ಲಾ ರೀತಿಯ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ ಎಂದು ಮಠದ ಸಿದ್ಧಲಿಂಗ ಸ್ವಾಮೀಜಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಠಕ್ಕೆ ಬಂದರೂ ಯಾವುದೇ ಕಾರ್ಯಕ್ರಮ ಮಾಡುವುದಿಲ್ಲ. ಕೇವಲ ಗದ್ದುಗೆ ದರ್ಶನ ಮಾತ್ರ ಇರುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.