ಶುಕ್ರವಾರ, ಜೂನ್ 18, 2021
28 °C

ಮದ್ಯ ಅಕ್ರಮ ಮಾರಾಟ; 203 ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಈ ವರ್ಷದ ಜನವರಿಯಿಂದ ಜೂನ್ ಅಂತ್ಯದವರೆಗೆ ತುಮಕೂರು ಉಪವಿಭಾಗ ವ್ಯಾಪ್ತಿಯಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ 683 ಕೇಂದ್ರಗಳ ಮೇಲೆ ದಾಳಿ ನಡೆಸಿ 203 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಬಕಾರಿ ಉಪ ಅಧೀಕ್ಷಕ ಎಚ್.ಜಿ.ವಿರೂಪಾಕ್ಷಪ್ಪ ತಿಳಿಸಿದ್ದಾರೆ.

ತುಮಕೂರು ಉಪವಿಭಾಗ ವ್ಯಾಪ್ತಿಯ ತುಮಕೂರು, ಕುಣಿಗಲ್, ಗುಬ್ಬಿ ತಾಲ್ಲೂಕುಗಳಲ್ಲಿ ದಾಳಿ ನಡೆಸಲಾಗಿದೆ. ಅಬಕಾರಿ ಕಾನೂನುಗಳ ಉಲ್ಲಂಘನೆ ಸೇರಿದಂತೆ ಒಟ್ಟು 292 ಮೊಕದ್ದಮೆಗಳನ್ನು ದಾಖಲಿಸಲಾಗಿದೆ. ಹಳ್ಳಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲು ಸಾಗಣೆ ಮಾಡುತ್ತಿದ್ದ ಎರಡು ಕಾರು, 12 ದ್ವಿಚಕ್ರ ವಾಹನಗಳನ್ನು ಪತ್ತೆ ಮಾಡಿ 502 ಲೀಟರ್ ಮದ್ಯ, 45 ಲೀಟರ್ ಬಿಯರ್, 600 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ ಒಟ್ಟು ₹ 25.25 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಹೇಳಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.