ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು, ಶಿರಾದಲ್ಲಿ ಮದ್ಯ ಮಾರಾಟ ನಿಷೇಧ

Published : 21 ಸೆಪ್ಟೆಂಬರ್ 2024, 6:21 IST
Last Updated : 21 ಸೆಪ್ಟೆಂಬರ್ 2024, 6:21 IST
ಫಾಲೋ ಮಾಡಿ
Comments

ತುಮಕೂರು: ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವವನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 21ರಂದು ಹಾಗೂ ಶಿರಾ ನಗರದಲ್ಲಿ ಸೆ.21, 22ರಂದು ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲಾಗಿದೆ.

ತುಮಕೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೆ. 21ರ ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆ ವರೆಗೆ ಹಾಗೂ ಶಿರಾ ನಗರದ 5 ಕಿ.ಮೀ ವ್ಯಾಪ್ತಿಯಲ್ಲಿ ಸೆ. 21ರ ಬೆಳಿಗ್ಗೆ 6 ಗಂಟೆಯಿಂದ ಸೆ. 22ರಂದು ಮಧ್ಯರಾತ್ರಿ 12 ಗಂಟೆ ವರೆಗೆ ಮದ್ಯ ಮಾರಾಟ, ಸಾಗಾಣಿಕೆ ನಿಷೇಧಿಸಲಾಗಿದೆ.

ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ಹಾದು ಹೋಗುವ ಪ್ರಮುಖ ಸ್ಥಳಗಳಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಒಣ ದಿನವೆಂದು ಘೋಷಿಸಲಾಗಿದೆ. ಕೆಎಸ್‍ಬಿಸಿಎಲ್ ಡಿಪೊ ಹೊರತುಪಡಿಸಿ ಎಲ್ಲಾ ತರದ ಮದ್ಯ ಮಾರಾಟ, ಸಾಗಾಣಿಕೆ ನಿಷೇಧಿಸಿ ಆದೇಶಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT