ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಕೃತಿಯೊಂದಿಗೆ ಹೊಂದಿಕೊಂಡು ಬದುಕಿ: ಗುರುಪರದೇಶೀಕೇಂದ್ರ ಸ್ವಾಮೀಜಿ ಸಲಹೆ

ಗುರುಪರದೇಶೀಕೇಂದ್ರ ಸ್ವಾಮೀಜಿ ಸಲಹೆ
Last Updated 22 ಆಗಸ್ಟ್ 2020, 6:29 IST
ಅಕ್ಷರ ಗಾತ್ರ

ತಿಪಟೂರು: ಇಂದಿನ ಪ್ರಕೃತಿ ವಿಕೋಪಗಳಿಗೆ ಮಾನವನೇ ನೇರವಾದ ಕಾರಣ. ಪ್ರಕೃತಿಯೊಂದಿಗೆ ಹೊಂದಿಕೊಂಡು ಬದುಕುವುದನ್ನು ಕಲಿತರೆ ಮಾತ್ರವೇ ಅಸ್ತಿತ್ವ ಸಾಧ್ಯ ಎಂದು ಕೆರೆಗೋಡಿ ರಂಗಾಪುರ ಮಠದ ಕ್ಷೇತ್ರಾಧ್ಯಕ್ಷ ಗುರುಪರದೇಶೀಕೇಂದ್ರ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ತಡಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬನ್ನಿಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ನಡೆದ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನವ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ವಿರುದ್ಧ ಅನೇಕ ಕಾರ್ಯಗಳನ್ನು ಮಾಡುತ್ತಿರುವುದೇ ಪ್ರಕೃತಿ ವಿಕೋಪಕ್ಕೆ ಕಾರಣ. ನಮ್ಮ ಸುತ್ತಲಿನ ಪರಿಸರ, ಪ್ರಾಣಿ, ಪಕ್ಷಿಗಳ ಸಂಕುಲವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆ ಎಂದು ಹೇಳಿದರು.

ಶಾಸಕ ಬಿ.ಸಿ.ನಾಗೇಶ್ ಮಾತನಾಡಿ, ನೈಸರ್ಗಿಕ ಸಂಪತ್ತಿನಲ್ಲಿ ಅತ್ಯಂತ ಅಮೂಲ್ಯ ಸಂಪತ್ತು ಜಲ. ಇದು ಸಕಲ ಜೀವರಾಶಿಗಳಿಗೂ ಅಗತ್ಯವಾಗಿದೆ. ಅಂತಹ ನೀರನ್ನು ಸಂರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದರು.

ಗ್ರಾಮೀಣಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲ, ತಾಲ್ಲೂಕು ಯೋಜನಾಧಿಕಾರಿ ಶಾಂತಾ ನಾಯಕ್, ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಶಿಧರ್, ವಲಯಾಧ್ಯಕ್ಷ ಯೋಗಾನಂದ್, ಆರ್ಥಿಕ ಸಾಕ್ಷರತಾ ಕೇಂದ್ರ ಸಮಾಲೋಚಕಿ ಪಿ.ರೇಖಾ, ಅಣ್ಣಪ್ಪ, ಸಂತೋಷ್, ಎ.ಜಿ.ಪ್ರವೀಣ್, ಪುಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT