ಶನಿವಾರ, ಜೂನ್ 6, 2020
27 °C
ಬಡವರ ಬಂಧು ಯೋಜನೆಯಡಿ ಡಿಸಿಸಿ ಬ್ಯಾಂಕ್‌ನಿಂದ ನೇರವಾಗಿ ಖಾತೆಗಳಿಗೆ ಜಮಾ

ತುಮಕೂರು: ಬೀದಿ ಬದಿ ವ್ಯಾಪಾರಿಗಳಿಗೆ ಸಾಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಲಾಕ್‌ಡೌನ್‍ನಿಂದ ಜಿಲ್ಲೆಯಾದ್ಯಂತ ಸಂಕಷ್ಟದಲ್ಲಿರುವ ಬೀದಿ ಬದಿ ವ್ಯಾಪಾರಿಗಳಿಗೆ ₹1 ಸಾವಿರದಿಂದ 10 ಸಾವಿರದವರೆಗೆ ಸಾಲ ನೀಡಲು ಡಿಸಿಸಿ ಬ್ಯಾಂಕ್ ಮುಂದಾಗಿದೆ.

ಜಿಲ್ಲಾ ಡಿಸಿಸಿ ಬ್ಯಾಂಕ್ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ 60 ಜನ ಬೀದಿ ಬದಿ ವ್ಯಾಪಾರಿಗಳಿಗೆ ನೇರವಾಗಿ ಅವರ ಶೂನ್ಯ ಉಳಿತಾಯ ಖಾತೆಗೆ ಸಾಲದ ಮೊತ್ತ ಜಮಾ ಮಾಡಿರುವ ಆದೇಶ ಪತ್ರಗಳನ್ನು ವಿತರಿಸಿದರು.

ಈ ವೇಳೆ ಮಾತನಾಡಿದ ಅವರು, ‘ಲಾಕ್‍ಡೌನ್‍ನಿಂದ ಬೀದಿ ಬದಿ ವ್ಯಾಪಾರಸ್ಥರು ಆರ್ಥಿಕ ಮುಗ್ಗಟ್ಟಿನಿಂದ ಕಷ್ಟಪಡುತ್ತಿದ್ದಾರೆ. ಜೀವನೋಪಾಯಕ್ಕೆ ಅನ್ಯ ಮಾರ್ಗವಿಲ್ಲದೆ ಖಾಸಗಿ ಲೇವಾದೇವಿ ಸಂಸ್ಥೆಯ ಶೋಷಣೆಗೆ ಒಳಗಾಗುತ್ತಿರುವುದನ್ನು ಅರಿತು ಬ್ಯಾಂಕ್ ಆಡಳಿತ ಮಂಡಳಿ ಈ ವ್ಯಾಪಾರಸ್ಥರಿಗೆ ಸಾಲ ನೀಡಲು ತೀರ್ಮಾನ ಕೈಗೊಂಡಿದೆ’ ಎಂದರು.

ಯಾವುದೇ ರೀತಿಯ ಆಧಾರ ಇಲ್ಲದೇ ಬಡವರ ಬಂಧು ಯೋಜನೆಯಡಿ ಸಾಲ ನೀಡಲಾಗುವುದು. ಜಿಲ್ಲೆಯ 10 ತಾಲ್ಲೂಕುಗಳ ನಿರ್ದೇಶಕರು ತಮ್ಮ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೆ ತಾವುಗಳೇ ಸಾಲದ ಚೆಕ್ ವಿತರಿಸಬಹುದು. ಇದಕ್ಕೆ ಅಧ್ಯಕ್ಷರನ್ನು ಕಾಯುವ ಅಗತ್ಯವಿಲ್ಲ ಎಂದು ಹೇಳಿದರು.

ಬ್ಯಾಂಕ್ ನಿರ್ದೇಶಕರಾದ ಬಿ.ಶಿವಣ್ಣ, ನರಸಿಂಹಯ್ಯ, ಎಸ್.ಲಕ್ಷ್ಮಿನಾರಾಯಣ, ಜಿ.ಜೆ.ರಾಜಣ್ಣ, ಎಸ್.ಆರ್.ರಾಜಕುಮಾರ್, ಆರ್.ರಾಜೇಂದ್ರ, ಬಿ.ಎಸ್.ದೇವರಾಜು, ಎಚ್.ಟಿ.ತಿಮ್ಮರಾಜು, ಟಿ.ಪಿ.ಮಂಜುನಾಥ್, ಬ್ಯಾಂಕ್ ಅಧಿಕಾರಿ ಜಂಗಮಪ್ಪ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಎಸ್.ಕುಬೇಂದ್ರನಾಯ್ಕ, ಬ್ಯಾಂಕ್ ಮಹಾಪ್ರಬಂಧಕ ಪಿ.ಎಸ್.ರಾಮಕೃಷ್ಣನಾಯಕ್, ತಾಲ್ಲೂಕು ಮೇಲ್ವಿಚಾರಕ ಮಧುಸೂದನ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು