ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಸೆ. 14ಕ್ಕೆ ಲೋಕ್ ಅದಾಲತ್

Published : 13 ಆಗಸ್ಟ್ 2024, 16:18 IST
Last Updated : 13 ಆಗಸ್ಟ್ 2024, 16:18 IST
ಫಾಲೋ ಮಾಡಿ
Comments

ತುಮಕೂರು: ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಪರಿಹರಿಸಲು ಸೆ. 14ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ.ಜಯಂತ್ ಕುಮಾರ್ ಇಲ್ಲಿ ಮಂಗಳವಾರ ತಿಳಿಸಿದರು.

ನ್ಯಾಯಾಲಯಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳನ್ನು ತಗ್ಗಿಸುವುದು. ಸಾರ್ವಜನಿಕರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಲೋಕ್ ಆದಾಲತ್‌ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕಳೆದ ಜುಲೈ ತಿಂಗಳಲ್ಲಿ ನಡೆದ ಲೋಕ್ ಆದಾಲತ್‌ನಲ್ಲಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ 97,719 ಪ್ರಕರಣಗಳ ಪೈಕಿ 10,203 ಹಾಗೂ 1,66,328 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ತ್ವರಿತವಾಗಿ, ವೆಚ್ಚವಿಲ್ಲದೆ ರಾಜಿಯಾಗಬಹುದಾದ ವ್ಯಾಜ್ಯ ಪೂರ್ವ, ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ‘ನ್ಯಾಯಾಲಯಗಳಲ್ಲಿ ಬಾಕಿ ಇರುವ ಅಪರಾಧ ಪ್ರಕರಣ, ಚೆಕ್ಕು ಅಮಾನ್ಯ, ಬ್ಯಾಂಕ್, ಮೋಟಾರು ಅಪಘಾತ ಪರಿಹಾರ, ನ್ಯಾಯಾಧಿಕರಣ, ಉದ್ಯೋಗಕ್ಕೆ ಪುನರ್ ನೇಮಕ, ಕಾರ್ಮಿಕ ವಿವಾದ, ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮು, ವಿದ್ಯುತ್, ನೀರಿನ ಶುಲ್ಕ, ವೈವಾಹಿಕ, ಕುಟುಂಬ ನ್ಯಾಯಾಲಯ ಪ್ರಕರಣ (ವಿಚ್ಛೇದನ ಪ್ರಕರಣ ಹೊರತುಪಡಿಸಿ), ಭೂಸ್ವಾಧೀನ, ವೇತನ, ಸೇವೆ, ಪಿಂಚಣಿ, ಕಂದಾಯ ಪ್ರಕರಣ, ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು’ ಎಂದು ವಿವರಿಸಿದರು.

ಮಾಹಿತಿಗಾಗಿ ಸದಸ್ಯ ಕಾರ್ಯದರ್ಶಿ ಕಚೇರಿ ದೂರವಾಣಿ 0816-2255133, ಮೊ. 9141193959 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT