ಮಂಗಳವಾರ, ನವೆಂಬರ್ 19, 2019
27 °C

ಲೋಕ್ ಅದಾಲತ್‌: 1,477 ಪ್ರಕರಣ ಇತ್ಯರ್ಥ

Published:
Updated:

ತುಮಕೂರು: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಜಿಲ್ಲಾದ್ಯಂತ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 1,477 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ಈ ಪೈಕಿ 253 ವ್ಯಾಜ್ಯ ಪೂರ್ವ ಪ್ರಕರಣ ಇತ್ಯರ್ಥಪಡಿಸಿ ₹ 1.82 ಕೋಟಿ ಪರಿಹಾರ ಕೊಡಿಸಲಾಗಿದೆ. ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದ್ದ 1,224 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ.

ರಾಜೀ ಸಂಧಾನದ ಮೂಲಕ 309 ಸಿವಿಲ್ ಪ್ರಕರಣಗಳನ್ನು ಬಗೆಹರಿಸಿ ₹ 81.56 ಲಕ್ಷ ಪರಿಹಾರ ಕೊಡಿಸಲಾಗಿದೆ.

631 ಕ್ರಿಮಿನಲ್ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿ ₹ 2.74 ಲಕ್ಷ ದಂಡ ವಸೂಲಿ ಮಾಡಲಾಗಿದೆ. ಅಲ್ಲದೇ 136 ಚೆಕ್ ಬೌನ್ಸ್‌ ಪ್ರಕರಣಗಳನ್ನು ಇತ್ಯರ್ಥಪಡಿಸಿ ಒಟ್ಟು ₹1.15 ಕೋಟಿಯನ್ನು ದೂರುದಾರರಿಗೆ ನಷ್ಟ ಪರಿಹಾರ ಕೊಡಿಸಲಾಗಿದೆ.

78 ಮೋಟಾರು ವಾಹನ ಅಪಘಾತ ಪ್ರಕರಣಗಳನ್ನು ಇತ್ಯರ್ಥಪಡಿಸಿ ₹ 3.90 ಕೋಟಿ ನಷ್ಟ ಪರಿಹಾರ ಕೊಡಿಸಲಾಗಿದೆ. ಅದಾಲತ್‍ನಲ್ಲಿ 34 ವೈವಾಹಿಕ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 9 ಕಾರ್ಮಿಕ ಪ್ರಕರಣಗಳನ್ನು ಇತ್ಯರ್ಥಪಡಿಸಿ ₹ 22.17 ಲಕ್ಷ ನಷ್ಟ ಪರಿಹಾರ ಕೊಡಿಸಲಾಗಿದೆ ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದಶರಥ ಬಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)