ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಬರ ಪರಿಹಾರ ಕೊಡದೆ ಓಟು ಕೇಳುತ್ತಿದ್ದಾರೆ: ಪರಮೇಶ್ವರ

Published 4 ಏಪ್ರಿಲ್ 2024, 15:49 IST
Last Updated 4 ಏಪ್ರಿಲ್ 2024, 15:49 IST
ಅಕ್ಷರ ಗಾತ್ರ

ತುಮಕೂರು: ‘ತೀವ್ರ ಬರದಿಂದ ರಾಜ್ಯ ತತ್ತರಿಸಿದ್ದರೂ ಪರಿಹಾರ ನೀಡದೆ ಗೃಹ ಸಚಿವ ಅಮಿತ್ ಶಾ ಮತ ಕೇಳುತ್ತಿದ್ದಾರೆ. ಯಾವ ಮುಖ ಇಟ್ಟುಕೊಂಡು ರಾಜ್ಯಕ್ಕೆ ಬಂದು ವೋಟು ಕೇಳುತ್ತಾರೆ. ಇವರಿಗೆ ಯಾವ ನೈತಿಕತೆ ಇದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಪ್ರಶ್ನಿಸಿದರು.

ನಗರದಲ್ಲಿ ಗುರುವಾರ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಮಾತನಾಡಿದರು.

ರಾಜ್ಯದಿಂದ 26 ಬಿಜೆಪಿ ಸಂಸತ್ ಸದಸ್ಯರನ್ನು ಆಯ್ಕೆ ಮಾಡಿ ಕಳುಹಿಸಿದ್ದರೂ ರಾಜ್ಯಕ್ಕೆ ಏನು ಕೊಡುಗೆ ಕೊಟ್ಟಿದ್ದೀರಿ? ಒಂದು ದಿನವೂ ಅಭಿವೃದ್ಧಿ ಬಗ್ಗೆ ಮಾತನಾಡಲಿಲ್ಲ. ಕೇವಲ ಐಟಿ, ಇಡಿ, ಸಿಬಿಐ ಮುಂದಿಟ್ಟುಕೊಂಡು ಬೆದರಿಸಿ ಜೈಲಿಗೆ ಕಳುಹಿಸುವ ಕೆಲಸ ಮಾಡುತ್ತಿದ್ದೀರಿ. ಇಲ್ಲ ಸಲ್ಲದ ಆರೋಪಗಳನ್ನು ಹೊರಿಸಿ ದೆಹಲಿ ಮುಖ್ಯಮಂತ್ರಿಯನ್ನು ಜೈಲಿಗೆ ತಳ್ಳಿದ್ದೀರಿ. ಇದನ್ನು ಪ್ರಜಾಪ್ರಭುತ್ವ ಎಂದು ಕರೆಯಬೇಕೆ ಎಂದು ಕೇಳಿದರು.

ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ 300ಕ್ಕೂ ಹೆಚ್ಚು ರೈತರನ್ನು ಕೊಂದು ಹಾಕಿದ್ದೀರಿ. ನ್ಯಾಯ ಕೇಳಿದರೆ ಕೊಲ್ಲುತ್ತೀರಿ. ತೆಂಗು ಬೆಳೆಗಾರರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದರೂ ಸ್ಪಂದಿಸುತ್ತಿಲ್ಲ. ಮತ ಕೇಳಲು ಯಾವ ಮುಖ ಹೊತ್ತು ರಾಜ್ಯಕ್ಕೆ ಬರುತ್ತೀರಿ ಎಂದು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT