ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಲೋಕಸಭಾ | ಮೈತ್ರಿ ಅಭ್ಯರ್ಥಿ ಸೋಮಣ್ಣ ಮತಯಾಚನೆ

Published 8 ಏಪ್ರಿಲ್ 2024, 13:16 IST
Last Updated 8 ಏಪ್ರಿಲ್ 2024, 13:16 IST
ಅಕ್ಷರ ಗಾತ್ರ

ತುಮಕೂರು: ಲೋಕಸಭಾ ಕ್ಷೇತ್ರದ ಬಿಜೆಪಿ– ಜೆಡಿಎಸ್‌ ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ನಗರದ ವಿವಿಧ ಕಡೆ ಸೋಮವಾರ ಪ್ರಚಾರ ನಡೆಸಿ, ಮತಯಾಚಿಸಿದರು.

ಕೋತಿತೋಪು, ಹುರುಳಿತೋಟ, ಶಿರಾಗೇಟ್‌, ಚಿಕ್ಕಪೇಟೆ, ಕೋಡಿಬಸವಣ್ಣ ದೇವಸ್ಥಾನ, ಎನ್‌.ಆರ್‌.ಕಾಲೊನಿ, ಸರಸ್ವತಿಪುರಂ ಪ್ರದೇಶಗಳಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ವೋಟು ನೀಡುವಂತೆ ಮನವಿ ಮಾಡಿದರು. ಚುನಾವಣೆಯಲ್ಲಿ ಮತ ನೀಡುವಂತೆ ಕೋರಿದರು. ಶಾಸಕ ಜಿ.ಬಿ.ಜ್ಯೋತಿಗಣೇಶ್‌, ಸಿದ್ಧಗಂಗಾ ಆಸ್ಪತ್ರೆಯ ನಿರ್ದೇಶಕ ಡಾ.ಎಸ್‌.ಪರಮೇಶ್‌ ಇತರೆ ಮುಖಂಡರು ಭಾಗವಹಿಸಿದ್ದರು.

ಮೈಸುಡುವ ಬಿಸಿಲಿನ ಮಧ್ಯೆ ನಗರದಲ್ಲಿ ಸುತ್ತಾಟ ಮುಂದುವರಿಸಿದರು. ಆಯಾ ಭಾಗದಲ್ಲಿ ಪ್ರಮುಖ ಮುಖಂಡರ ಮನೆಗಳಿಗೆ ತೆರಳಿ ಚರ್ಚಿಸಿದರು. ಚುನಾವಣೆಯಲ್ಲಿ ಬೆಂಬಲಿಸುವಂತೆ ಮನವಿ ಮಾಡಿದರು. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT