ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಲ್ಲೆ: ಮತಗಟ್ಟೆ ಬಳಿ ನೀರಗಂಟಿ ಆತ್ಮಹತ್ಯೆ

Published 26 ಏಪ್ರಿಲ್ 2024, 22:39 IST
Last Updated 26 ಏಪ್ರಿಲ್ 2024, 22:39 IST
ಅಕ್ಷರ ಗಾತ್ರ

ಕುಣಿಗಲ್‌ (ತುಮಕೂರು): ತಾಲ್ಲೂಕಿನ ಹಳೆವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿಚವಾಡಿ ಗ್ರಾಮದಲ್ಲಿ ಶುಕ್ರವಾರ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾಗಿದ್ದ ನೀರಗಂಟಿ ಚಂದ್ರಶೇಖರ್‌ (45) ಎಂಬುವರು ಮತಗಟ್ಟೆಯ ಎದುರುಗಡೆ ಇರುವ ಓವರ್‌ ಹೆಡ್‌ ಟ್ಯಾಂಕ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಂದ್ರಶೇಖರ್‌ ಅವರನ್ನು ಕಿಚವಾಡಿ ಮತಗಟ್ಟೆಗೆ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ಅವರನ್ನು ಗಮನಿಸಿದ ಕಾಂಗ್ರೆಸ್‌ ಕಾರ್ಯಕರ್ತರು ವಿಡಿಯೊ ಮಾಡಿಕೊಂಡಿದ್ದಾರೆ. ‘ಸರ್ಕಾರಿ ಕೆಲಸದಲ್ಲಿ ಇದ್ದುಕೊಂಡು, ಚುನಾವಣೆ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದರೂ ಬಿಜೆಪಿ ಪರ ಮತಯಾಚನೆ ಮಾಡುತ್ತಿದ್ದಾರೆ’ ಎಂದು ಹಲ್ಲೆ ನಡೆಸಿದ್ದರು.

ಈ ಘಟನೆಯ ನಂತರ ಚಂದ್ರಶೇಖರ್‌ ಕಿಚವಾಡಿ ಮತಗಟ್ಟೆಯ ಎದುರುಗಡೆ ಇರುವ ಓವರ್‌ ಹೆಡ್‌ ಟ್ಯಾಂಕ್‌ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ಕಾಂಗ್ರೆಸ್‌ ಮುಖಂಡರು ಹಲ್ಲೆ ನಡೆಸಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ’ ಎಂದು ಬಿಜೆಪಿ, ಜೆಡಿಎಸ್‌ ಮುಖಂಡರು ಆರೋಪಿಸಿದ್ದಾರೆ. ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT