ಸೋಮವಾರ, 27 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ಮತ್ತೊಮ್ಮೆ ಅವಕಾಶ ಕೊಡಿ: ಮುದ್ದಹನುಮೇಗೌಡ

Published 4 ಏಪ್ರಿಲ್ 2024, 15:50 IST
Last Updated 4 ಏಪ್ರಿಲ್ 2024, 15:50 IST
ಅಕ್ಷರ ಗಾತ್ರ

ತುಮಕೂರು: ಹಿಂದೆ ಲೋಕಸಭೆ ಸದಸ್ಯರಾಗಿದ್ದ ಸಮಯದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರವನ್ನು ಸಮರ್ಥವಾಗಿ ಪ್ರತಿನಿಧಿಸಿದ್ದೆ. ಮತ್ತೊಮ್ಮೆ ಅವಕಾಶ ಮಾಡಿಕೊಟ್ಟರೆ ಇನ್ನೂ ಸಮರ್ಥವಾಗಿ ಕೆಲಸ ಮಾಡುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಮನವಿ ಮಾಡಿದರು.

ನಗರದಲ್ಲಿ ಗುರುವಾರ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಮಾತನಾಡಿದರು. ಹಿಂದೆಯೂ ಜಿಲ್ಲೆಯ ಜನರ ನಂಬಿಕೆ, ವಿಶ್ವಾಸಕ್ಕೆ ದ್ರೋಹ ಬಗೆದಿಲ್ಲ. ಮುಂದೆಯೂ ಅಂತಹ ಕೆಲಸ ಮಾಡುವುದಿಲ್ಲ. ಜನರು ಯೋಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಕೇಳಿಕೊಂಡರು.

ಜಿಲ್ಲೆಯಿಂದ ಆಯ್ಕೆಯಾಗಿದ್ದ ಸಂಸತ್ ಸದಸ್ಯರು ರೈತರು, ಕೊಬ್ಬರಿ ಬೆಲೆ ಕುಸಿತದ ಬಗ್ಗೆ ಒಮ್ಮೆಯೂ ಮಾತನಾಡಲಿಲ್ಲ. ರಾಜ್ಯದಿಂದ ಆಯ್ಕೆಯಾಗಿದ್ದ ಸಂಸದರೂ ಬಾಯಿ ಬಿಡಲಿಲ್ಲ. ಜನರ ಸಮಸ್ಯೆಗೆ ಸ್ಪಂದಿಸದೆ ಮೋಸ ಮಾಡಿದರು ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT