ಭಾನುವಾರ, 3 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆಗೆ BJP -JDS ಮೈತ್ರಿ: ದೇವೇಗೌಡ ಸ್ಪರ್ಧೆಗೆ ಬಸವರಾಜು ವಿರೋಧ

Published 23 ಸೆಪ್ಟೆಂಬರ್ 2023, 12:52 IST
Last Updated 23 ಸೆಪ್ಟೆಂಬರ್ 2023, 12:52 IST
ಅಕ್ಷರ ಗಾತ್ರ

ತುಮಕೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ– ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಿದರೆ ಜಿಲ್ಲೆಯ ಜನರು ವೋಟು ಹಾಕುವುದಿಲ್ಲ ಎಂದು ಬಿಜೆಪಿ ಸಂಸದ ಜಿ.ಎಸ್.ಬಸವರಾಜು ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಿಂದ ದೇವೇಗೌಡ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದರು.

‘ನಮ್ಮ ಪಕ್ಷದವರು ಮೈತ್ರಿ ಮಾಡಿಕೊಂಡು ಜಿಲ್ಲೆಯಿಂದ ದೇವೇಗೌಡ ಅವರನ್ನು ನಿಲ್ಲಿಸಲು ಹೊರಟಿದ್ದಾರೆ. ಹೇಮಾವತಿ ನೀರಿನ ವಿಚಾರದಲ್ಲಿ ಜಿಲ್ಲೆಗೆ ಗೌಡರು ಎಂದೂ ಕಂಡರಿಯದಷ್ಟು ಮೋಸ ಮಾಡಿದ್ದಾರೆ. ಯಾರಿಗಾದರೂ ವೋಟ್ ಹಾಕಲಿ. ಗೌಡರಿಗೆ ವೋಟ್ ಹಾಕಬಾರದು. ಅವರಿಗೆ ವೋಟ್ ಹಾಕಿದರೆ ಜಿಲ್ಲೆಯ ಜನತೆ ಪಾಪ ಮಾಡಿದಂತಾಗುತ್ತದೆ ಎಂದು ತಿಳಿಸಿದರು.

ಲೋಕಸಭೆಗೆ ಜೆಡಿಎಸ್‌ನವರು ಐದು ಕ್ಷೇತ್ರ ಕೇಳಿದ್ದು, ತುಮಕೂರನ್ನು ಬಿಟ್ಟುಕೊಡುವಂತೆ ಬೇಡಿಕೆ ಇಟ್ಟಿದ್ದಾರೆ. ‘ರಕ್ತ ಕೊಟ್ಟರೂ ಜಿಲ್ಲೆಗೆ ಹೇಮಾವತಿ ನೀರು ಕೊಡಲ್ಲ’ ಎಂದು ಹೇಳಿದ್ದ ದೇವೇಗೌಡ ಅವರನ್ನು ಇಲ್ಲಿನ ಜನರು ಒಮ್ಮೆ ಸೋಲಿಸಿದ್ದಾರೆ. ಅವರ ಸಂಬಂಧಿಗಳೂ ವೋಟ್ ಹಾಕಲ್ಲ. ಒಕ್ಕಲಿಗ ಸಮುದಾಯದ ಒಬ್ಬರೂ ಮತ ಹಾಕಲ್ಲ ಎಂದರು.

‘ತುಮಕೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ವಿ.ಸೋಮಣ್ಣ ಅವರನ್ನು ನಾನು ಕರೆದಿಲ್ಲ. ಆದರೆ ಅವರ ಭವಿಷ್ಯಕ್ಕೆ ಅಡ್ಡಿಯಾಗುವುದಿಲ್ಲ. ಎಲ್ಲಿ ನಿಂತರೂ ಬೆಂಬಲಿಸುತ್ತೇನೆ ಎಂದು ಹೇಳಿದ್ದೇನೆ. ಕಳೆದ ಚುನಾವಣೆಯಲ್ಲಿ ನಾನು ಗೆಲ್ಲಲು ಸೋಮಣ್ಣ ಕಾರಣ. ಚುನಾವಣೆ ಖರ್ಚಿಗೆ ಅವರೇ ದುಡ್ಡು ಕೊಟ್ಟಿದ್ದು’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT