ಬುಧವಾರ, 17 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ ಚುನಾವಣೆ | ತುಮಕೂರು: ಮಠಗಳತ್ತ ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ

Published 18 ಮಾರ್ಚ್ 2024, 13:24 IST
Last Updated 18 ಮಾರ್ಚ್ 2024, 13:24 IST
ಅಕ್ಷರ ಗಾತ್ರ

ತುಮಕೂರು: ಈಗಾಗಲೇ ಪ್ರಚಾರ ಆರಂಭಿಸಿರುವ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ನಿಯೋಜಿತ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಅವರು ಈಗ ಮಠಗಳತ್ತ ಚಿತ್ತ ಹರಿಸಿದ್ದು, ಸ್ವಾಮೀಜಿಗಳ ಭೇಟಿಯಲ್ಲಿ ನಿರತರಾಗಿದ್ದಾರೆ.

ಬಿಜೆಪಿ ನಿಯೋಜಿತ ಅಭ್ಯರ್ಥಿ ವಿ.ಸೋಮಣ್ಣ ಸಹ ಮಠಗಳಿಗೆ ಭೇಟಿ ನೀಡುತ್ತಿದ್ದು, ಈಗ ಮುದ್ದಹನುಮೇಗೌಡ ಸಹ ಅದೇ ದಾರಿಯಲ್ಲಿ ಸಾಗಿದ್ದಾರೆ. ಈಗಾಗಲೇ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿಯನ್ನು ಗೌಡರು ಭೇಟಿಯಾಗಿದ್ದರು. ಸೋಮವಾರ ಒಂದೇ ದಿನದಲ್ಲಿ ಮೂರು ಮಠಗಳಿಗೆ ಭೇಟಿ ಕೊಟ್ಟರು.

ನಾಗಮಂಗಲ ತಾಲ್ಲೂಕು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಜಾತ್ರೆ ಮಹೋತ್ಸವದ ಚಾಲನಾ ಕಾರ್ಯಕ್ರಮದಲ್ಲಿ ಕೆಲ ಸಮಯ ಪಾಲ್ಗೊಂಡಿದ್ದರು. ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು.

ನಂತರ ಹೊಸದುರ್ಗ ತಾಲ್ಲೂಕಿನ ಕನಕ ಗುರುಪೀಠದ ಶಾಖಾ ಮಠಕ್ಕೆ ತೆರಳಿ ಈಶ್ವರಾನಂದಪುರಿ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಅಲ್ಲಿಂದ ಹೊಸದುರ್ಗ ತಾಲ್ಲೂಕು ಮದುರೆ ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದರು.

ವಿ.ಸೋಮಣ್ಣ ಸಹ ಆದಿಚುಂಚನಗಿರಿ, ಸಿದ್ಧಗಂಗಾ ಮಠ ಸೇರಿದಂತೆ ಹಲವು ಮಠಗಳಿಗೆ ಈಗಾಗಲೇ ಭೇಟಿನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT