ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮತದಾನ ಜಾಗೃತಿ: ಬೈಕ್‌ ಜಾಥಾ

Published 24 ಮಾರ್ಚ್ 2024, 7:50 IST
Last Updated 24 ಮಾರ್ಚ್ 2024, 7:50 IST
ಅಕ್ಷರ ಗಾತ್ರ

ತುಮಕೂರು: ಮತದಾನದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ನಗರದ ಹೊರ ವಲಯದ ಹೆಗ್ಗೆರೆಯಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್‌ ಸಮಿತಿಯಿಂದ ಬೈಕ್‌ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಸುಮಾರು 300 ಬೈಕ್‌ ಸವಾರರು ಜಾಥಾದಲ್ಲಿ ಭಾಗವಹಿಸಿದ್ದರು. ಹೆಗ್ಗೆರೆಯಿಂದ ಆರಂಭವಾದ ಜಾಥಾ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಸಾಗಿ ಬಂತು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಹಸಿರು ನಿಶಾನೆ ತೋರುವ ಮೂಲಕ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡಬೇಕು. ಈ ಬಾರಿ ಜಿಲ್ಲೆಯಲ್ಲಿ 44 ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ. ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ’ ಎಂದು ತಿಳಿಸಿದರು.

ಪ್ರತಿಯೊಂದು ಗ್ರಾ.ಪಂ, ತಾ.ಪಂ, ಜಿಲ್ಲಾ ಕೇಂದ್ರಗಳಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಕೃಷಿ ಇಲಾಖೆ ಉಪನಿರ್ದೇಶಕ ಅಶೋಕ್‌, ಡಿಡಿಪಿಐ ಸಿ.ರಂಗದಾಮಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಂ.ಎಸ್‌.ಶ್ರೀಧರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್‌ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT