ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲೋಕಸಭಾ ಚುನಾವಣೆ: ಜೆಡಿಎಸ್‌ಗೆ ತುಮಕೂರು ಕ್ಷೇತ್ರ ಬಿಟ್ಟು ಕೊಡಲು ಒತ್ತಾಯ

Published 25 ಫೆಬ್ರುವರಿ 2024, 13:22 IST
Last Updated 25 ಫೆಬ್ರುವರಿ 2024, 13:22 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡಬೇಕು. ಜೆಡಿಎಸ್‌ನಿಂದ ಸ್ಪರ್ಧಿಸಲು ನನಗೆ ಅವಕಾಶ ಕಲ್ಪಿಸಬೇಕು ಎಂದು ಜೆಡಿಎಸ್‌ ಮುಖಂಡ ಕೆ.ಟಿ.ಶಾಂತಕುಮಾರ್‌ ಇಲ್ಲಿ ಭಾನುವಾರ ಒತ್ತಾಯಿಸಿದರು.

2019ರ ಚುನಾವಣೆಯಲ್ಲಿ ತುಮಕೂರಿನಲ್ಲಿ ಜೆಡಿಎಸ್‌ ಶೇ 34 ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿಯೂ ಜೆಡಿಎಸ್‌ನಿಂದ ಸ್ಥಳೀಯರಿಗೆ ಟಿಕೆಟ್‌ ಕೊಡಬೇಕು. ಇದರಿಂದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲವು ಸಾಧ್ಯವಾಗಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ವಿಶ್ವಾಸ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಒಕ್ಕಲಿಗ ಮತದಾರರ ಸಂಖ್ಯೆ ಹೆಚ್ಚಿದೆ. ಕಳೆದ ಬಾರಿ ಜೆಡಿಎಸ್‌ ವರಿಷ್ಠ ಎಚ್.ಡಿ.ದೇವೇಗೌಡರ ವಿರುದ್ಧ ಅಪಪ್ರಚಾರ ನಡೆಸಿದ್ದರು. ಆದರೂ ಶೇ 47 ರಷ್ಟು ಜನ ಅವರಿಗೆ ಮತ ಹಾಕಿದ್ದರು. ಅದರಲ್ಲಿ ಶೇ 34 ರಷ್ಟು ಮತಗಳು ಜೆಡಿಎಸ್‌ ಮತದಾರರಿಂದ ಬಂದಿದೆ. ಈ ಬಾರಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್‌ ನೀಡಬೇಕು ಎಂದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ತುಮಕೂರು ಲೋಕಸಭಾ ಕ್ಷೇತ್ರದ ಬಗ್ಗೆ ಪರಿಶೀಲನೆ ನಡೆಸಬೇಕು. ಜೆಡಿಎಸ್‌ ಅಭ್ಯರ್ಥಿಯ ಸ್ಪರ್ಧೆಗೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT