ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈತ್ರಿ ಎದುರು ಮಂಕಾದ ಕಾಂಗ್ರೆಸ್‌: ಗೋವಿಂದ ಕಾರಜೋಳ

Published 6 ಏಪ್ರಿಲ್ 2024, 13:49 IST
Last Updated 6 ಏಪ್ರಿಲ್ 2024, 13:49 IST
ಅಕ್ಷರ ಗಾತ್ರ

ಶಿರಾ: ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮುಂದೆ ಕಾಂಗ್ರೆಸ್ ಮಂಕಾಗಿದೆ. ಅವರು ಜನರ ಬಳಿ ಮತ ಕೇಳಲೂ ಬಾರದ ಸ್ಥಿತಿಯಲ್ಲಿದ್ದಾರೆ ಎಂದು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಹೇಳಿದರು.

ನಗರದಲ್ಲಿ ಶನಿವಾರ ನಡೆದ ಜೆಡಿಎಸ್, ಬಿಜೆಪಿ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದರು‌.

ಸುಳ್ಳ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ 10 ತಿಂಗಳು ಕಳೆದರೂ ಒಂದು ಪೈಸೆ ಅನುದಾನ ನೀಡಿಲ್ಲ. ಯಾವುದೇ ಕಾಮಗಾರಿ ನಡೆದಿಲ್ಲ. ಹಾಗಾಗಿ ಕಾಂಗ್ರೆಸ್ ಶಾಸಕರು ಮತ ಕೇಳಲು ಹೋಗುತ್ತಿಲ್ಲ ಎಂದರು.

ಜೆಡಿಎಸ್ ರಾಜ್ಯ ಸಮಿತಿ ಸದಸ್ಯ ಆರ್.ಉಗ್ರೇಶ್ ಮಾತನಾಡಿ, ಬೂತ್ ಮಟ್ಟದಲ್ಲಿ ಜೆಡಿಎಸ್, ಬಿಜೆಪಿ ಒಗ್ಗೂಡಿ ಕೆಲಸ ಮಾಡಿದರೆ ಗೆಲುವು ಸಾಧ್ಯ ಎಂದರು.

ಮಾಜಿ ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ ಮಾತನಾಡಿ, ಗೋವಿಂದ ಕಾರಜೋಳ ಲೋಕೋಪಯೋಗಿ ಸಚಿವರಾಗಿದ್ದಾಗ ಶಿರಾ ಕ್ಷೇತ್ರಕ್ಕೆ ₹100 ಕೋಟಿ ಅನುದಾನ ನೀಡುವ ಮೂಲಕ ಪ್ರತಿಯೊಂದ ಗ್ರಾಮ ರಸ್ತೆ ಕಾಣುವಂತಾಯಿತು. ಮದಲೂರು ಕೆರೆಗೆ ಹೇಮಾವತಿ ನೀರು ಬರಲು ಇವರ ಶ್ರಮವೇ ಕಾರಣ ಎಂದರು.

ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಮಾತನಾಡಿ, ‘ನರೇಂದ್ರ ಮೋದಿ ಅವರು ಜಗ ಮೆಚ್ಚಿದ ಪ್ರಧಾನಿಯಾದರೆ, ದೇವೇಗೌಡ ಅವರು ಜನ ಮೆಚ್ಚಿದ ಪ್ರಧಾನಿಯಾಗಿದ್ದರು. ಇವರ ಮೈತ್ರಿಗೆ ಚ್ಯುತಿಬಾರದಂತೆ ನಡೆದುಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದು ಹೇಳಿದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ನವೀನ್, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಅಂಜಿನಪ್ಪ, ಲಿಂಗಮೂರ್ತಿ, ಸತ್ಯಪ್ರಕಾಶ್ ಮಾತನಾಡಿದರು.

ಮಾಜಿ ಶಾಸಕ ತಿಪ್ಪಾರೆಡ್ಡಿ, ತಿಮ್ಮರಾಯಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ, ನಾರು ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ರಂಗಶ್ವಾಮಯ್ಯ, ಅರೇಹಳ್ಳಿ ಬಾಬು, ಮದ್ದೇವಳ್ಳಿ ರಾಮಕೃಷ್ಣ, ನರಸಿಂಹಮೂರ್ತಿ, ಆರ್.ರಾಘವೇಂದ್ರ, ಕಾಡುಗೊಲ್ಲ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಪಡಿರಮೇಶ್, ರಹಮತ್ ವುಲ್ಲಾಖಾನ್, ವಿಜಯರಾಜು ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT