ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: 200ಕ್ಕೂ ಹೆಚ್ಚು ಮಾದರಿ ಮತಗಟ್ಟೆ

Published 26 ಏಪ್ರಿಲ್ 2024, 4:25 IST
Last Updated 26 ಏಪ್ರಿಲ್ 2024, 4:25 IST
ಅಕ್ಷರ ಗಾತ್ರ

ತುಮಕೂರು: ಮತದಾರರನ್ನು ಮತಗಟ್ಟೆಗೆ ಕರೆತರಲು ಜಿಲ್ಲಾ ಸ್ವೀಪ್‌ ಸಮಿತಿಯು ನಾನಾ ಕಸರತ್ತುಗಳನ್ನು ನಡೆಸುತ್ತಿದೆ. ಮಾದರಿ ಮತಗಟ್ಟೆಗಳನ್ನು ಸಿದ್ಧಪಡಿಸುವ ಮೂಲಕ ಮತದಾರರನ್ನು ಸೆಳೆಯುವ ಕೆಲಸಕ್ಕೆ ಮುಂದಾಗಿದೆ.

ಚುನಾವಣಾ ಯೋಗದಿಂದ ಜಿಲ್ಲೆಯಲ್ಲಿ 50 ಮತಗಟ್ಟೆ ನಿರ್ಮಿಸುವ ಗುರಿ ನೀಡಲಾಗಿತ್ತು. ಎಲ್ಲ ತಾಲ್ಲೂಕುಗಳ ಆಯ್ದ ಕಡೆಗಳಲ್ಲಿ 200ಕ್ಕೂ ಹೆಚ್ಚು ವಿಷಯಾಧಾರಿತ ಮಾದರಿ ಮತಗಟ್ಟೆಗಳನ್ನು ನಿರ್ಮಿಸಲಾಗಿದೆ. ಗ್ರಾಮೀಣ ಸೊಗಡು, ಸಂಸ್ಕೃತಿ, ಪರಿಸರ, ಐತಿಹಾಸಿಕ ಸ್ಥಳ ಸೇರಿದಂತೆ ಹಲವು ವಿಷಯಾಧಾರಿತ ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದೆ.

ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಹೆಚ್ಚಿದ್ದು, ಅವರಿಗಾಗಿ ಸಖಿ ಮತಗಟ್ಟೆ ಸಿದ್ಧಪಡಿಸಲಾಗಿದೆ. ಜಿಲ್ಲೆಯ ವಿವಿಧ ಕಲೆ, ಸಂಸ್ಕೃತಿ, ಐತಿಹಾಸಿಕ, ಪ್ರಸಿದ್ಧ ಸ್ಥಳಗಳು, ಕ್ಷೀರ ಪಥ, ಜಲ ಸಂರಕ್ಷಣೆ, ಶಿಕ್ಷಣ ಸ್ನೇಹಿ, ಕ್ರೀಡೆ, ವೀರಗಾಸೆ ಸೇರಿದಂತೆ ಜಾನಪದ ಕಲೆಗಳ ಆಧಾರದ ಮೇಲೆಯೂ ಮತಗಟ್ಟೆ ರೂಪಿಸಲಾಗಿದೆ.

‘ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಮತದಾರರಿಗೆ ಅನುಕೂಲವಾಗುವಂತೆ ಮತಗಟ್ಟೆಗಳಲ್ಲಿ ನೆರಳಿನ ವ್ಯವಸ್ಥೆ, ಕುಡಿಯುವ ನೀರು, ಅಗತ್ಯ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ತಿಳಿಸಿದ್ದಾರೆ.

ತುಮಕೂರಿನಲ್ಲಿ ಸಖಿ ಮತಗಟ್ಟೆ
ತುಮಕೂರಿನಲ್ಲಿ ಸಖಿ ಮತಗಟ್ಟೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT