ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಲೋಕ ಅದಾಲತ್‌: ವಿಚ್ಛೇದನಕ್ಕಾಗಿ ಬಂದು ಪುನಃ ಒಂದಾದ ಐದು ದಂಪತಿ

Last Updated 14 ಆಗಸ್ಟ್ 2022, 3:23 IST
ಅಕ್ಷರ ಗಾತ್ರ

ತುಮಕೂರು: ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಜಿಲ್ಲೆಯ ಐದು ದಂಪತಿ ಮತ್ತೆ ಒಂದಾಗಿದ್ದಾರೆ.

ಜಿಲ್ಲಾ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಹಿಂದಿನ ಎಲ್ಲಾ ಮನಸ್ತಾಪಗಳನ್ನು ಬದಿಗಿಟ್ಟು 5 ದಂಪತಿ ಮತ್ತೆ ಒಂದಾದರು. ಇದು ಎರಡೂ ಕಡೆಯ ಕುಟುಂಬದ ಸದಸ್ಯರು, ಸ್ನೇಹಿತರ ಸಂತಸಕ್ಕೆ ಕಾರಣವಾಯಿತು.

ನ್ಯಾಯಾಧೀಶರು, ವಕೀಲರ ಸಲಹೆಯಂತೆ ವಿಚ್ಛೇದನ ಅರ್ಜಿ ಹಿಂಪಡೆದು, ಪರಸ್ಪರ ಹಾರ ಬದಲಾಯಿಸಿಕೊಳ್ಳುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಜಿಲ್ಲಾ ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಐವರು ದಂಪತಿ ಲೋಕ ಅದಾಲತ್‌ನಲ್ಲಿ ಒಂದಾಗಿದ್ದಾರೆ ಎಂದು ವಕೀಲರೊಬ್ಬರು ತಿಳಿಸಿದರು.

ಕೌಟುಂಬಿಕ ಜಿಲ್ಲಾ ನ್ಯಾಯಾಧೀಶ ಎನ್. ಮುನಿರಾಜು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ, ಆಡಳಿತಾಧಿಕಾರಿ ನರಸಿಂಹಪ್ಪ, ಆಡಳಿತ ಶಿರಸ್ತೇದಾರರಾದ ಎಂ.ಕೆ. ಜಗದೀಶ್, ನವೀನ್‌ಕುಮಾರ್, ಗೋವಿಂದರಾಜು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT