ತುಮಕೂರು: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಶಿರಾದ ಸಹಾಯಕ ಎಂಜಿನಿಯರ್ ನಾಗೇಂದ್ರಪ್ಪ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಸೋಮವಾರ ದಾಳಿ ನಡೆಸಿದ್ದಾರೆ.
ನಗರದ ಮಿರ್ಜಿ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಮನೆ ಮತ್ತು ಶಿರಾ ಪಟ್ಟಣದಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.
ಲೋಕಾಯುಕ್ತ ಡಿವೈಎಸ್ ಪಿಗಳಾದ ಮಂಜುನಾಥ್, ಹರೀಶ್ ನೇತೃತ್ವದ ಅಧಿಕಾರಿಗಳ ತಂಡ ದಾಖಲೆ ಪರಿಶೀಲನೆಯಲ್ಲಿ ತೊಡಗಿಸಿಕೊಂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.