ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ ಲೋಕೇಶ್ವರ

Published 12 ಏಪ್ರಿಲ್ 2024, 5:18 IST
Last Updated 12 ಏಪ್ರಿಲ್ 2024, 5:18 IST
ಅಕ್ಷರ ಗಾತ್ರ

ತಿಪಟೂರು: ನಿವೃತ್ತ ಎಸಿಪಿ ಲೋಕೇಶ್ವರ್ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದರು.

ನಗರದಲ್ಲಿ ಕಾರ್ಯಕರ್ತರ ಸಭೆ ನಡೆಸಿ, ಕಾರ್ಯಕರ್ತರೊಂದಿಗೆ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದರು.

ನಂತರ ಮಾತನಾಡಿದ ಅವರು, ಶಾಸಕ ಕೆ.ಷಡಕ್ಷರಿ ಅವರ ಅಹಂಕಾರ ವರ್ತನೆ, ಕುಟುಂಬ ರಾಜಕಾರಣ ಹೆಚ್ಚಾಗಿದೆ. ಕಾರ್ಯಕರ್ತರ ಸಮಸ್ಯೆಗಳಿಗೆ ಸ್ವಂದಿಸದೆ ನಿರ್ಲಕ್ಷ್ಯ ತೋರಿದ್ದಾರೆ. ತಾಲ್ಲೂಕು ಆಡಳಿತ ವ್ಯವಸ್ಥೆ ಕುಸಿದಿದ್ದು, ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಷಡಕ್ಷರಿ ಪಕ್ಷದ ಕಾರ್ಯಕರ್ತರಿಗೆ ಸಮರ್ಪಕವಾಗಿ ಸ್ವಂದಿಸುತ್ತಿಲ್ಲ ಎಂದು ದೂರಿದರು.

ಶಾಸಕರ ನಡವಳಿಕೆಯ ಬಗ್ಗೆ ರಾಜ್ಯ ಹಾಗೂ ಜಿಲ್ಲೆಯ ನಾಯಕರ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸದ ಕಾರಣ ಸಾಮೂಹಿಕವಾಗಿ ಪಕ್ಷ ತೊರೆದಿದ್ದೇವೆ ಎಂದರು.

ಲೋಕಸಬಾ ಚುನಾವಣೆಯಲ್ಲಿ ಯಾರನ್ನು ಬೆಂಬಲಿಸಬೇಕು ಎಂಬ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ. ಮುದ್ದಹನುಮೇಗೌಡ, ವಿ.ಸೋಮಣ್ಣ ಇಬ್ಬರು ಅಭ್ಯರ್ಥಿಗಳ ಬೆಂಬಲ ಕೋರಿದ್ದಾರೆ. ಕಾರ್ಯಕರ್ತರೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

‘ಕಾಂಗ್ರೆಸ್‌ ನಗರ ಹಾಗೂ ಗ್ರಾಮಾಂತರ ಅಧ್ಯಕ್ಷರು ನಾಮಕಾವಸ್ಥೆಗೆ ಇದ್ದು, ಯಾವ ಕಾರ್ಯಕ್ರಮಕ್ಕೂ ಸರಿಯಾಗಿ ಕಾರ್ಯಕರ್ತರಿಗೆ ತಿಳಿಸುತ್ತಿಲ್ಲ. ನಗರಸಭೆ ಸದಸ್ಯರು ಸೇರಿದಂತೆ 61 ಮಂದಿ ಗ್ರಾಮ ಪಂಚಾಯಿತಿ ಸದಸ್ಯರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿದ್ದೇವೆ’ ಎಂದರು.

ನಗರಸಭಾ ಸದಸ್ಯ ಸೊಪ್ಪುಗಣೇಶ್, ಭಾರತಿ ಮಂಜುನಾಥ್, ಮಾಜಿ ಎಪಿಎಮ್‍ಸಿ ನಿರ್ದೇಶಕ ಬಸವರಾಜು, ಶಶಿಧರ್, ರೇಣು, ಮಲ್ಲೇಶ್, ಹಳ್ಳಿಕಾರ್ ವಿನಯ್‍ ಮಡೆನೂರು, ಹರೀಶ್, ರಾಜಶೇಖರ್, ಬನ್ನಿಹಳ್ಳಿ ಮಧು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT