ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಂಗ್ ಜಂಪ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ರಮ್ಯಾ

Last Updated 27 ಸೆಪ್ಟೆಂಬರ್ 2019, 12:33 IST
ಅಕ್ಷರ ಗಾತ್ರ

ಗೌರಿಬಿದನೂರು: ನಗರದ ನೇತಾಜಿ‌ ಕ್ರೀಡಾಂಗಣದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಹೊಸೂರು ಹೋಬಳಿಯ ಕೋಟಾಲದಿನ್ನೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕೆ.ಆರ್.ರಮ್ಯಾ ಲಾಂಗ್ ಜಂಪ್ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವೀಣಾಕ್ಷಮ್ಮ ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಿಕ್ಷಣದ ಜತೆಗೆ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತಸದ ವಿಚಾರವಾಗಿದೆ. ಇದರಿಂದ ಕಾಲೇಜು ಆಡಳಿತ ಮಂಡಳಿ ಹಾಗೂ ಪೋಷಕರ ಶ್ರಮಕ್ಕೆ ಪ್ರತಿಫಲ ದೊರೆತಂತಾಗಿದೆ. ಮುಂದಿನ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವ ಮೂಲಕ ಉಜ್ವಲವಾದ ಭವಿಷ್ಯ ರೂಪಿಸಿಕೊಳ್ಳಲಿ ಎಂದು ಹೇಳಿದರು.

ಕಾಲೇಜಿನ ಹಿರಿಯ ಉಪನ್ಯಾಸಕರಾದ ಕೆ.ಸತ್ಯೇಂದ್ರ, ಜಿ.ವಿ.ಶ್ರೀನಿವಾಸ್, ಸೀನಪ್ಪ, ಮುರಳಿಕೃಷ್ಣ, ಸೌಮ್ಯ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT