ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವು

Last Updated 19 ಸೆಪ್ಟೆಂಬರ್ 2020, 8:06 IST
ಅಕ್ಷರ ಗಾತ್ರ

ಮಧುಗಿರಿ: ನಿಂತಿದ್ದ ಲಾರಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಮೂರು ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಿಡಿಗೇಶಿ ಹೋಬಳಿ ಕ್ಯಾತನಾಗಹಳ್ಳಿ ಸಮೀಪ ಶುಕ್ರವಾರ ರಾತ್ರಿ ನಡೆದಿದೆ.

ಪಾವಗಡ ತಾಲ್ಲೂಕಿನ ನಲಿಗಾನಹಳ್ಳಿಯ ದುಗ್ಗಪ್ಪ (22), ಬ್ಯಾಡನೂರು ಗ್ರಾಮದ ನರಸಮ್ಮ (48) ಹಾಗೂ ಮಡಕಶಿರಾ ತಾಲ್ಲೂಕಿನ ಎನ್.ಆರ್. ರೊಪ್ಪ ಗ್ರಾಮದ ಚಾಲಕ ನರಸಿಂಹಮೂರ್ತಿ (32) ಮೃತಪಟ್ಟವರು. ನಲಿಗಾನಹಳ್ಳಿಯ ಮಾರಣ್ಣ (55), ಅಲುವೇಲಮ್ಮ (45) ಹಾಗೂ ಗೋವಿಂದಪ್ಪ (50) ಗಾಯಗೊಂಡವರು.

ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಿಕೊಂಡು ಸ್ವ ಗ್ರಾಮಕ್ಕೆ ತೆರಳುತ್ತಿದ್ದಾಗ, ಅಪಘಾತ ಸಂಭವಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT