ಶುಕ್ರವಾರ, ನವೆಂಬರ್ 27, 2020
23 °C

ಅಂತರ್ಜಾತಿ ವಿವಾಹಕ್ಕೆ ವಿರೋಧ: ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿಪಟೂರು (ತುಮಕೂರು ಜಿ): ತಾಲ್ಲೂಕಿನ ನೊಣವಿನಕೆರೆ ಹೋಬಳಿಯ ಮತ್ತಿಘಟ್ಟ ಬಳಿಯ ಹೇಮಾವತಿ ನಾಲೆಯಲ್ಲಿ ಪ್ರೇಮಿಗಳಿಬ್ಬರ ಶವ ದೊರೆತಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಬಾಗೂರು ಗ್ರಾಮದ ಸುಂಗದ ಬಳಿ ಬೈಕ್ ನಿಲ್ಲಿಸಿ ನ.16ರಂದು ಹಿರಿಸಾವೆ ಗ್ರಾಮದ ಸುಶ್ಮಿತಾ(18) , ಮತ್ತಿಘಟ್ಟ ಗ್ರಾಮದ ರಮೇಶ್ (19)ನಾಲೆಗೆ ಜಿಗಿದಿದ್ದಾರೆ. ಪರಸ್ಪರ ಇಬ್ಬರು ಹಗ್ಗ ಕಟ್ಟಿಕೊಂಡು ಸಾವಿನಲ್ಲಿಯೂ ಒಂದಾಗಿದ್ದಾರೆ.

ಸುಶ್ಮಿತಾ ಪದವಿ ಓದುತ್ತಿದ್ದು, ರಮೇಶ್ ಐಟಿಐ ಓದುತ್ತಿದ್ದರು. ಕಳೆದ ಒಂದು ವರ್ಷದಿಂದ ಪ್ರೀತಿಸುತ್ತಿದ್ದರು. ಅಂತರ್ಜಾತಿಯ ಕಾರಣದಿಂದ ವಿವಾಹಕ್ಕೆ ಮನೆಯವರಿಂದ ವಿರೋಧ ವ್ಯಕ್ತವಾಗುತ್ತದೆ ಎಂದು ಹೆದರಿದ್ದರು.

ಈ ಇಬ್ಬರು ಕಾಣೆಯಾಗಿರುವ ಬಗ್ಗೆ ಹಿರಿಸಾವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು