ತಿಪಟೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದಾಗಿ ತಾಲ್ಲೂಕಿನ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಅಡುಗೆ ಅನಿಲದ ಅಭಾವ ತೀವ್ರವಾಗಿದೆ. ಯುದ್ಧದ ಕಾರಣದಿಂದ ಅಡುಗೆ ಅನಿಲ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಆನ್ಲೈನ್ ಮತ್ತು ಕರೆ ಮಾಡುವ ಮೂಲಕ ಅಡುಗೆ ಅನಿಲ ಬುಕ್ಕಿಂಗ್ ಸಾಧ್ಯವಾಗುತ್ತಿಲ್ಲ. ಹೀಗಾಗಿ, ಗ್ರಾಹಕರು ಅಡುಗೆ ಅನಿಲ ಪೂರೈಕೆ ಮಾಡುವ ಏಜೆನ್ಸಿ ಕಚೇರಿಗೆ ಬಂದು ಅಡುಗೆ ಅನಿಲ ಸಿಲಿಂಡರ್ ಪಡೆಯಲು ದಿನವಿಡೀ ಸರತಿ ಸಾಲಿನಲ್ಲಿ ಕಾದು ನಿಲ್ಲುವ ಅನಿವಾರ್ಯತೆ ಎದುರಾಯಿತು.

ಸೋಮವಾರ ಬೆಳಗ್ಗೆ ಸುಮಾರು 9 ಗಂಟೆಯಿಂದಲೇ ಗ್ರಾಹಕರು ಏಜೆನ್ಸಿ ಕಚೇರಿ ಮುಂದೆ ಸಿಲಿಂಡರ್ ಪಡೆಯಲು ಸಾಲುಗಟ್ಟಿ ನಿಂತಿದ್ದರು. ಒಂದು ಸಿಲಿಂಡರ್ ಪಡೆಯಲು ಗ್ರಾಹಕರು ಪೂರ್ತಿ ದಿನ ಬಿರುಬಿಸಿಲಿನಲ್ಲೇ ನಿಲ್ಲಬೇಕಾಯಿತು ಎಂದು ಸಾರ್ವಜನಿಕರು ಅಲವತ್ತುಕೊಂಡರು.

ಸಿಲಿಂಡರ್ ಬುಕ್ಕಿಂಗ್ ವ್ಯವಸ್ಥೆ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅನೇಕ ಗ್ರಾಹಕರು ಬುಕ್ಕಿಂಗ್ ಮಾಡಲು ಸಾಧ್ಯವಾಗದೆ ನೇರವಾಗಿ ಏಜೆನ್ಸಿಗೆ ಬಂದರು. ಇದರಿಂದಾಗಿ ಮಹಿಳೆಯರು ಮತ್ತು ಏಕಪೋಷಕ ಕುಟುಂಬಗಳು ಹೆಚ್ಚು ತೊಂದರೆ ಅನುಭವಿಸಿವೆ. ಮಕ್ಕಳನ್ನು ಶಾಲೆ ಮತ್ತು ಕಾಲೇಜಿಗೆ ಕಳುಹಿಸುವ ಸಮಯದಲ್ಲೇ ಗ್ಯಾಸ್ ಸಿಲಿಂಡರ್ ಪಡೆಯಲು ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಿದೆ ಎಂದು ಮಹಿಳೆಯರು ಅಳಲು ತೋಡಿಕೊಂಡರು.

ಈಗ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳ ಸಮಯವಾಗಿರುವುದರಿಂದ ಮನೆಯ ಕೆಲಸಗಳ ಜವಾಬ್ದಾರಿ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಗ್ಯಾಸ್ ಸಿಲಿಂಡರ್ ಕೊರತೆಯಿಂದ ಮನೆಗಳಲ್ಲಿ ಅಡುಗೆ ಮಾಡುವುದೇ ಕಷ್ಟಕರವಾಗಿದೆ ಎಂದು ಗೃಹಿಣಿಯರು ಹೇಳುತ್ತಿದ್ದಾರೆ.

ಸಿಲಿಂಡರ್ ಪಡೆಯುವ ವೇಳೆ ಪ್ರತಿ ಸಿಲಿಂಡರ್ಗೆ ₹20 ರಿಂದ ₹50 ಹೆಚ್ಚುವರಿ ಶುಲ್ಕ ನೀಡಬೇಕಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ. ಇದರಿಂದ ಗ್ರಾಹಕರು ಇನ್ನಷ್ಟು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಗ್ಯಾಸ್ ಸಿಲಿಂಡರ್ ಸರಬರಾಜು ವ್ಯವಸ್ಥೆ ಸರಿಪಡಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.