ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ನ ಜಾಹೀರಾತು ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿದೆ: ಆರ್. ಅಶೋಕ

Published 22 ಏಪ್ರಿಲ್ 2024, 10:55 IST
Last Updated 22 ಏಪ್ರಿಲ್ 2024, 10:55 IST
ಅಕ್ಷರ ಗಾತ್ರ

ತುಮಕೂರು: ಕಾಂಗ್ರೆಸ್ ನೀಡಿರುವ ಜಾಹೀರಾತಿನ ಚೊಂಬಿನಲ್ಲಿ ಹಿಂದೂಗಳ ರಕ್ತ ತುಂಬಿಕೊಂಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಕಿಡಿಕಾರಿದರು.

ನಗರದಲ್ಲಿ ಸೋಮವಾರ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಖಂಡಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ತಾಲೀಬಾನ್ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಜಾಹೀರಾತಿನ ಚೊಂಬಿನ ಪೂರ್ತಿ ರಕ್ತ ತುಂಬಿದೆ. ಚೊಂಬಿನಿಂದ ಹಿಂದೂಗಳ ರಕ್ತ ತುಂಬಿ ಚೆಲ್ಲುತ್ತಿರುವುದು ಅದರ ಪ್ರತೀಕವಾಗಿದೆ. ಇದಕ್ಕೆ ಪ್ರತಿಯಾಗಿ ‘ಕಾಂಗ್ರೆಸ್ ಬಂದ್ರೆ ಡೇಂಜರ್’ ಎಂದು ಬಿಜೆಪಿಯಿಂದಲೂ ಜಾಹೀರಾತು ನೀಡಲಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಕೊಲೆ, ಸುಲಿಗೆ ಹೆಚ್ಚಾಗಿವೆ. ಗೂಂಡಾ ರಾಜ್ಯ ಮಾಡಲು ಹೊರಟಿದೆ. ಮುಸ್ಲಿಂ ಭಯೋತ್ಪಾದಕರು ಏನು ಮಾಡಿದರೂ ರಕ್ಷಣೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಜೈ ಶ್ರೀರಾಮ್ ಘೋಷಣೆ ಕೂಗುವುದು ಸಹ ಅಪರಾಧವಾಗಿದೆ ಎಂದು ಟೀಕಿಸಿದರು.

ಮುಸ್ಲಿಂ ಯುವಕರಿಗೆ ತರಬೇತಿ ಕೊಟ್ಟು ಹಿಂದೂ ಯುವತಿಯರನ್ನು ಪ್ರೀತಿಸುವ ನಾಟಕವಾಡಿ, ಲವ್ ಜಿಹಾದ್ ನಡೆಸುವಂತೆ ಹೇಳಿಕೊಡಲಾಗುತ್ತಿದೆ. ಇದಕ್ಕಾಗಿ ಹೊರಗಿನಿಂದ ಹಣ ಬರುತ್ತಿದೆ. ಲವ್ ಜಿಹಾದ್‌ನಿಂದಲೇ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ನಡೆದಿದ್ದು, ಅದನ್ನು ಮುಚ್ಚಿ ಹಾಕುವ ಪ್ರಯತ್ನದಲ್ಲಿ ಸರ್ಕಾರ ತೊಡಗಿದೆ. ಇದು ನಿಮ್ಮ ಹಿಂದೂ ವಿರೋಧಿ ನೀತಿಯಲ್ಲವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT