ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ರೈಲ್ವೆ ಕೆಲಸದ ಆಮಿಷ: ₹7 ಲಕ್ಷ ವಂಚನೆ

Published 4 ಮೇ 2024, 15:53 IST
Last Updated 4 ಮೇ 2024, 15:53 IST
ಅಕ್ಷರ ಗಾತ್ರ

ತುಮಕೂರು: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ₹7.58 ಲಕ್ಷ ವಂಚಿಸಿದ ಆರೋಪದ ಮೇರೆಗೆ ಎಂ.ಮಧು ಎಂಬುವರ ವಿರುದ್ಧ ಬೆಳ್ಳಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಧು ಲಿಂಗಾಯತ ಮ್ಯಾಟ್ರಿಮೋನಿ ಮುಖಾಂತರ ನಮ್ಮ ಅಣ್ಣನಿಗೆ ಪರಿಚಯವಾಗಿದ್ದರು. ನಂತರ ಕರೆ ಮಾಡಿ ‘ನಾನು ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದು, ನಿಮಗೂ ಸಹ ಇಲ್ಲಿಯೇ ಕೆಲಸ ಕೊಡಿಸುವುದಾಗಿ’ ತಿಳಿಸಿದ್ದಾರೆ. ನಂತರ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಂತ ಹಂತವಾಗಿ ₹7,58,772 ಹಣ ಪಡೆದುಕೊಂಡು ಮೋಸ ಮಾಡಿದ್ದಾರೆ’ ಎಂದು ಪಿ.ಗೊಲ್ಲಹಳ್ಳಿಯ ಯುವತಿ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ.

‘ಮಾರ್ಚ್‌ 12ರಿಂದ ಏ. 10ರ ವರೆಗೆ ವಿವಿಧ ಬ್ಯಾಂಕ್‌ ಖಾತೆ, ಯುಪಿಐ ಐ.ಡಿ ಮತ್ತು ಫೋನ್ ಪೇ ಮುಖಾಂತರ ಹಣ ವರ್ಗಾಯಿಸಲಾಗಿದೆ. ಇದುವರೆಗೆ ಕೆಲಸದ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಕೆಲಸದ ಆಸೆ ತೋರಿಸಿ ಹಣ ಪಡೆದು ವಂಚಿಸಿದ್ದಾರೆ’ ಎಂದು ಶ್ವೇತಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT