ತುಮಕೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಶಾಸಕ ಎಂ.ಡಿ.ಲಕ್ಷ್ಮೀನಾರಾಯಣ ಪಕ್ಷಕ್ಕೆ ವಿದಾಯ ಹೇಳಿದ್ದು, ಬಿಜೆಪಿ ಸೇರಲು ಸಜ್ಜಾಗಿದ್ದಾರೆ.

ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ ಹೇಳಿದರು.

ತುರುವೇಕೆರೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದರು.

`10 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿ ನಂತರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದೆ. ಕಳೆದ 5 ವರ್ಷಗಳಿಂದ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷನಾಗಿ ಪಕ್ಷ ನೀಡಿದ ಜವಬ್ದಾರಿ ನಿರ್ವಹಿಸಿದ್ದೇನೆ. ಎಲ್ಲಾ ಜಿಲ್ಲೆ, ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿ ಹಿಂದುಳಿದ ವರ್ಗಗಳಲ್ಲಿ ಬರುವ 197 ಜಾತಿಗಳ ಪ್ರಮುಖರು ಹಾಗೂ ಸಮುದಾಯಗಳನ್ನು ಗುರುತಿಸಿ ಸಂಘಟನೆ ಮಾಡಿದ್ದೇನೆ. ಆ ಮೂಲಕ ಪಕ್ಷವನ್ನು ಬಲಪಡಿಸುವ ನಿಟ್ಟಿಲ್ಲಿ ಕೆಲಸ ಮಾಡಿದೆ.

ಆದರೆ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ನಿಲುವು ಹಿಂದುತ್ವದ ವಿರೋಧಿಯಾಗಿದ್ದು ಯಾವುದೇ ಹಿಂದೂ ಸಂಘಟನೆಗಳನ್ನು ಮೂಲೆ ಗುಂಪು ಮಾಡುವಲ್ಲಿ ತೆಗೆದುಕೊಂಡ ನಿರ್ಣಯವನ್ನು ವಿರೋಧಿಸಿದ್ದೆ. ಹಿಂದೆ ನಾನು ಸಂಘ ಪರಿವಾರದ ಮೂಲಕ ಬಂದಿದ್ದು, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷನಾಗಿ ಅನೇಕ ಹಿಂದೂ ಸಂಘನೆಗಳೊಂದಿಗೆ ಕೆಲಸ ಮಾಡಿರುವೆ ಎಂದರು.

ಕಾಂಗ್ರೆಸ್ ಪಕ್ಷದ ನಾಯಕರ ಜೊತೆ ಈ ಬಗ್ಗೆ ಚರ್ಚಿಸಿದಾಗ ಆರ್ ಎಸ್ಎಸ್ ಮೂಲದ ವ್ಯಕ್ತಿಗಳು ಪಕ್ಷದಲ್ಲಿ ಹೊಂದಾಣಿಕೆಯಿಂದ ಕೆಲಸ ಮಾಡಲು ಸಾದ್ಯವಿಲ್ಲ ಎಂಬ ಮಾತುಗಳು ಹೊರ ಬಂದ ನಂತರ ನನ್ನ ರಾಜಕೀಯ ಭವಿಷ್ಯ ಮತ್ತು ಮುಂದಿನ ದಾರಿಗಳ ಬಗ್ಗೆ ಚಿಂತಿಸಿದೆ.

ತುರುವೇಕೆರೆ ವಿಧಾಸಭಾ ಕ್ಷೇತ್ರದಿಂದ ನನ್ನನ್ನು ಹಿಂದೆ ಆಯ್ಕೆಮಾಡಿ ಕಳುಹಿಸಿದ ಅಭಿಮಾನಿಗಳ ಜೊತೆಗೆ ಚರ್ಚಿಸಿದೆ. ಕಳೆದ 20 ವರ್ಷಗಳಿಂದ ನೇಕಾರ ಸಮಾಜದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ರಾಜ್ಯದ ಎಲ್ಲಾ ನೇಕಾರ ಬಂಧುಗಳು, ಹಿಂದುಳಿದ ವರ್ಗಗಳ ಎಲ್ಲ ಪ್ರಮುಖರು ಹಾಗೂ ಹಿಂದುಳಿದ ನಾಯಕರ ಜತೆ ಚರ್ಚಿಸಿದೆ. ಅವರು ನನಗೆ ಸ್ಪಷ್ಟ ಸಲಹೆ ಕೊಟ್ಟರು ಎಂದರು.

ಹಿಂದೆ ಬಿಜೆಪಿಯಲ್ಲಿ ಶಾಸಕನಾಗಿ, ವಿಧಾನ ಪರಿಷತ್ ಸದಸ್ಯನಾಗಿ, ಜವಳಿ ಅಭಿವೃದ್ದಿ ನಿಮಗ ಅಧ್ಯಕ್ಷನಾಗಿ ಕೆಲಸ ಮಾಡಲು ಕಾರಣೀಭೂತರಾದ ಬಿಜೆಪಿಗೆ ಪುನಃ ಮರಳ ಬೇಕೆಂದು ತೀರ್ಮಾನಿಸಿದೆ. ಜತೆಗೆ ಹಿಂದುಳಿದ ವರ್ಗದ ರಾಜ್ಯಧ್ಯಕ್ಷನಾಗಿ ಐದು ವರ್ಷ ತುಂಬಿದ ಸಂರ್ಭದಲ್ಲಿ ಕಾಂಗ್ರೆಸ್ ಪಕ್ಷದ ನಾಯಕರುಗಳ ನಡೆವಳಿಕೆ ವಿರೋಧಿಸಿ ಗೌರಿ, ಗಣೇಶ ಹಬ್ಬದ ದಿನವೇ ರಾಜೀನಾಮೆ ನೀಡುತ್ತಿದ್ದೇನೆ.

ಬಿಜೆಪಿ ಅಧ್ಯಕ್ಷರು ಹಿರಿಯ ನಾಯಕರು ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅವರು ಕೊಟ್ಟ ದಿನಾಂಕದಂದು ಬಿಜೆಪಿ ಸೇರುತ್ತೇನೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯ ಕೊಟ್ಟಿಕೆರೆ ಕಾಂತರಾಜು, ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿ ಗಿರೀಶ್, ಮಹಲಿಂಗಪ್ಪ, ನರಸಿಂಹಮೂರ್ತಿ, ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.