ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿಯಲ್ಲಿ ನಕಲಿ ನೋಟುಗಳ ಹಾವಳಿ

Last Updated 17 ಜನವರಿ 2019, 13:14 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಸುತ್ತಮುತ್ತ ನಕಲಿ ಮತ್ತು ಜೆರಾಕ್ಸ್ ನೋಟುಗಳ ಹಾವಳಿ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಕೆಲ ಕಿಡಿಗೇಡಿಗಳು ₹ 50, ₹ 100 ಹಾಗೂ ₹ 200 ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿಸಿ ಚಲಾವಣೆ ಮಾಡುತ್ತಿದ್ದಾರೆ. ಈ ನಕಲಿ ನೋಟುಗಳ ಚಲಾವಣೆಯಿಂದ ಅಮಾಯಕರು ಮೋಸ ಹೋಗುತ್ತಿದ್ದಾರೆ.

‘₹ 2 ಸಾವಿರದ ನೋಟು ಚಲಾವಣೆಗೆ ಬಂದ ಮೇಲೆ ಚಿಲ್ಲರೆ ಸಮಸ್ಯೆ ಎದುರಾಗಿರುವುದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲ ಕಿಡಿಗೇಡಿಗಳು ₹ 100 ಹಾಗೂ ₹ 200ರ ಅಸಲಿ ನೋಟುಗಳನ್ನು ಕಲರ್ ಜೆರಾಕ್ಸ್ ಮಾಡಿ ಚಲಾವಣೆ ಮಾಡುತ್ತಿದ್ದಾರೆ. ಇದರಿಂದ ನಕಲಿ ನೋಟುಗಳ ಹಾವಳಿ ಹೆಚ್ಚಾಗುತ್ತಿವೆ’ ಎಂದು ಅಡಿಕೆ ವ್ಯಾಪಾರಿ ತಾತಾ ರಾಮಲಿಂಗಶೆಟ್ಟಿ ಹೇಳುತ್ತಾರೆ.

ತಾಲ್ಲೂಕಿನಲ್ಲಿ ನಡೆಯುವ ಸಂತೆಗಳಲ್ಲಿ ₹ 50 , ₹ 100 ಹಾಗೂ ₹ 200ರ ನಕಲಿ ಮತ್ತು ಅಸಲಿ ನೋಟು ಯಾವುದು ಎಂಬುದು ತಿಳಿಯದಾಗಿದೆ ಎಂದು ಸಂತೆ ವ್ಯಾಪಾರಿ ಗೋವಿಂದ ಹೇಳಿದರು.

ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಇತ್ತ ಗಮನ ಹರಿಸಿ, ಈ ದಂಧೆಯಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT