ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ: ಅಕ್ಕನನ್ನು ಚುಡಾಯಿಸುತ್ತಿದ್ದವನಿಗೆ ಚಾಕುವಿನಿಂದ ಇರಿದ ಯುವಕ

Published 27 ಮಾರ್ಚ್ 2024, 7:06 IST
Last Updated 27 ಮಾರ್ಚ್ 2024, 7:06 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಕಾರೇನಹಳ್ಳಿ ಗ್ರಾಮದಲ್ಲಿ ತನ್ನ ಅಕ್ಕನನ್ನು ಚುಡಾಯಿಸುತ್ತಿದ್ದ ಎಂಬ ಕಾರಣಕ್ಕೆ ರವಿಕುಮಾರ್ (21) ಎಂಬಾತ ಕೆ.ಟಿ.ನಾಗರಾಜು (35) ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ.

ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ನಾಗರಾಜುರನ್ನು ಸ್ಥಳೀಯರು ಹೊಸಕೆರೆಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಮಿಡಿಗೇಶಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ಆರೋಪಿ ರವಿಕುಮಾರ್‌ನನ್ನು ಪೊಲೀಸರು ಅನುಮಾನದಿಂದ ಪ್ರಶ್ನಿಸಿದ್ದು, ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT