ಮಂಗಳವಾರ, ಜೂನ್ 2, 2020
27 °C

ಶೀಲ ಶಂಕಿಸಿ ಪತ್ನಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಧುಗಿರಿ: ತಾಲ್ಲೂಕಿನ ದೊಡ್ಡೇರಿ ಹೋಬಳಿಯ ಊಮನಹಳ್ಳಿ ಗ್ರಾಮದಲ್ಲಿ ಪತ್ನಿಯ ಶೀಲ ಶಂಕಿಸಿ ಪತಿಯೇ ಪತ್ನಿಯ ಕೊಲೆ ಮಾಡಿದ್ದಾನೆ.

ಆರೋಪಿ ಬಸವರಾಜನನ್ನು ಪೊಲೀಸರು ಬಂಧಿಸಿದ್ದಾರೆ. ಸಾವಿತ್ರಮ್ಮ (36) ಕೊಲೆಯಾದ ಗೃಹಿಣಿ. 

ಹಿರಿಯೂರು ತಾಲ್ಲೂಕಿನ ಮುದಿಯಪ್ಪನ ಕೊಟ್ಟಿಗೆ ಗ್ರಾಮದದವರಾದ ದಂಪತಿ ಹಾಗೂ ಮಗಳು ಊಮನಹಳ್ಳಿಯ ಆಂಜನೇಯ ಸ್ವಾಮಿ ದೇವಾಲಯಕ್ಕೆ ಬಂದಿದ್ದರು. ಮಾರ್ಚ್‌ 24ರಂದು ಲಾಕ್‌ಡೌನ್ ಆಗಿದ್ದರಿಂದ ವಾಹನಗಳು ಇಲ್ಲದ ಕಾರಣ ದೇವಾಲಯದಲ್ಲಿಯೇ ತಂಗಿದ್ದರು.

ಆಗ ಬಸವರಾಜ ತನ್ನ ಪತ್ನಿಯ ಶೀಲ ಶಂಕಿಸಿ ದೇವಸ್ಥಾನದ ಸಮೀಪ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿದ್ದಾನೆ. ಪತ್ನಿ ಶೀಲದ ವಿಚಾರವಾಗಿ ಆಗಾಗ್ಗೆ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗಿದೆ.  ಬಡವನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.