ಮಧುಗಿರಿ: ತಾಲ್ಲೂಕಿನ ಕಸಬಾ ಹೋಬಳಿಯ ಮಾಡಗನಹಟ್ಟಿಯ ಜಾನಪದ ಕಲಾವಿದ ದಾಸಪ್ಪ (76) ಭಾನುವಾರ ಸಂಜೆ ವಯೋಸಹಜ ಕಾಯಿಲೆಯಿಂದ ನಿಧನರಾದರು.

ನಾಲ್ಕನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿರುವ ಇವರು ಜಾನಪದ ಲೋಕದ ಹಾಡುಗಳನ್ನು ಹಾಡಿ, ಜಂಜಪ್ಪನ ಕಾವ್ಯವನ್ನು ನಿರಂತರವಾಗಿ ಹಾಡುತ್ತಾ, ಜಂಜಪ್ಪನನ್ನು ಜಾನಪದ ಜಗತ್ತಿನ ಅವಿಭಾಜ್ಯ ಅಂಗವಾಗಿ ರೂಪಿಸುವುದರಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರ ಮೌಖಿಕ ಸಾಹಿತ್ಯವನ್ನು ಹಂಪೆಯ ಕರ್ನಾಟಕ ವಿವಿ ಸಂಗ್ರಹಿಸಿ ಪ್ರಕಟಿಸಿದೆ. ದಾಸಪ್ಪ ಅವರು ಕರ್ನಾಟಕ ಜಾನಪದ ಅಕಾಡೆಮಿಯ ರಾಜ್ಯ ಪ್ರಶಸ್ತಿ, ಜಿಲ್ಲಾ ಕನಕ ಪ್ರಶಸ್ತಿ, ಮಧುಗಿರಿ ತಾಲ್ಲೂಕಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಮೃತರಿಗೆ ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಭಾನುವಾರ ಸಂಜೆ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-1084866561

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.