ಮಂಗಳವಾರ, 27 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧುಗಿರಿ: ಹಾಸ್ಟೆಲ್‌ ಬಾಲಕಿಗೆ ಹೆರಿಗೆ! ವಾರ್ಡನ್‌ ಅಮಾನತು

ಹೊಟ್ಟೆ ನೋವು ಎಂದು ಆಸ್ಪತ್ರೆಗೆ ಹೋದ ಬಾಲಕಿಗೆ ಹೆರಿಗೆ
Published 10 ಜನವರಿ 2024, 20:42 IST
Last Updated 10 ಜನವರಿ 2024, 20:42 IST
ಅಕ್ಷರ ಗಾತ್ರ

ಮಧುಗಿರಿ: ತಾಲ್ಲೂಕಿನ ವಸತಿ ಶಾಲೆಯ ಹಾಸ್ಟೆಲ್‌ ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ಪ್ರಕರಣದ ಸಂಬಂಧ ವಸತಿ ನಿಲಯದ ಮಹಿಳಾ ವಾರ್ಡನ್‌ನನ್ನು ಬುಧವಾರ ಅಮಾನತು
ಗೊಳಿಸಲಾಗಿದೆ.

‘ಹಾಸ್ಟೆಲ್ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದರೂ ಅದನ್ನು ಗಮನಿಸದೆ ಕರ್ತವ್ಯಲೋಪ ಎಸಗಿದ ಆರೋಪದಲ್ಲಿ ವಾರ್ಡನ್ ಅಮಾನತು ಮಾಡಲಾಗಿದೆ’ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಆದೇಶದಲ್ಲಿ ತಿಳಿಸಿದ್ದಾರೆ.  

ತುಮಕೂರು ಜಿಲ್ಲೆಯ ವಸತಿ ಶಾಲೆಯಲ್ಲಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಲಕಿ ಹೊಟ್ಟೆ ನೋವು ಎಂದು ಊರಿಗೆ ಮರಳಿದ್ದಳು. ನೋವು ಹೆಚ್ಚಾಗಿದ್ದರಿಂದ ಪೋಷಕರು ಆಕೆಯನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು.

ಹೊಟ್ಟೆನೋವು ಎಂದ ಕಾರಣ ಬಾಲಕಿಯ ಸ್ಕ್ಯಾನಿಂಗ್‌ ಹಾಗೂ ಇತರ ವೈದ್ಯಕೀಯ ಪರೀಕ್ಷೆ ಮಾಡಿದಾಗ ಏಳು ತಿಂಗಳು ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ವೈದ್ಯರು ಮಂಗಳವಾರ ಶಸ್ತ್ರಚಿಕಿತ್ಸೆಯ ಮೂಲಕ ಮಗುವನ್ನು ಹೊರತೆಗೆದಿದ್ದರು. ಈ ಬಗ್ಗೆ ವೈದ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. 

ಪ್ರೌಢಶಾಲೆಯಲ್ಲಿ ಕಲಿಯುತ್ತಿದ್ದ ಬಾಲಕಿಯನ್ನು ಈ ಕುರಿತು ಪ್ರಶ್ನಿಸಿದಾಗ ವಸತಿ ಶಾಲೆಯ ಬಳಿಯ ಯುವಕನೊಬ್ಬನೊಂದಿಗೆ ದೈಹಿಕ ಸಂಪರ್ಕ ಹೊಂದಿರುವುದಾಗಿ ತಿಳಿಸಿದ್ದಾಳೆ.

ಕಳೆದ ಮೂರು ವರ್ಷಗಳಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 317 ಬಾಲಕಿಯರು ಗರ್ಭ ಧರಿಸಿದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT