ಮಂಗಳವಾರ, ಅಕ್ಟೋಬರ್ 27, 2020
20 °C
ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ವರ್ಗದ 6 ಮಂದಿ ಮಹಿಳೆಯರ ನಡುವೆ ಪೈಪೋಟಿ

ಮಧುಗಿರಿ ಪುರಸಭೆ: ಅಧ್ಯಕ್ಷರ ಆಯ್ಕೆ ಹಾದಿ ಸುಗಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಇಲ್ಲಿನ ಪುರಸಭೆಗೆ ಚುನಾವಣೆ ನಡೆದು, ಎರಡು ವರ್ಷದ ನಂತರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ನಿಗದಿಯಾಗಿದೆ.

23 ಸದಸ್ಯ ಬಲದ ಪುರಸಭೆಯಲ್ಲಿ 13 ಕಾಂಗ್ರೆಸ್, 9 ಜೆಡಿಎಸ್ ಹಾಗೂ ಒಬ್ಬರು ಪಕ್ಷೇತರ ಸದಸ್ಯರಿದ್ದಾರೆ. ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತವಿದ್ದರೂ, ಪರಿಶಿಷ್ಟ ಪಂಗಡದ ಯಾವುದೇ ಸದಸ್ಯರಿಲ್ಲ. ಜೆಡಿಎಸ್‌ನಿಂದ ಆಯ್ಕೆಯಾಗಿರುವ ಸದಸ್ಯ ತಿಮ್ಮರಾಜು ಅವರು ಒಂದು ವರ್ಷದಿಂದ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡು ಸಭೆ ಹಾಗೂ ಸಮಾರಂಭದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಗಾಗಿ ತಿಮ್ಮರಾಜು ಅವರಿಗೆ ಅಧ್ಯಕ್ಷ ಸ್ಥಾನ ದೊರಕುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್‌ನಿಂದಲೇ ಆಯ್ಕೆಯಾಗಿರುವ ಪರಿಶಿಷ್ಟ ಪಂಗಡದ ಮತ್ತೊಬ್ಬ ಸದಸ್ಯೆ ಪಾರ್ವತಮ್ಮ ಅವರು ತಿಮ್ಮರಾಜು ಸಂಬಂಧಿಯಾಗಿರುವುದರಿಂದ ಅಧ್ಯಕ್ಷರ ಹಾದಿ ಮತ್ತಷ್ಟು ಸುಗಮವಾಗಿದೆ ಎನ್ನಲಾಗುತ್ತಿದೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ ಇಬ್ಬರು ಸದಸ್ಯರು ಜೆಡಿಎಸ್‌ನಿಂದ ಗೆದ್ದಿರುವುದರಿಂದ ಜೆಡಿಎಸ್‌ ಸದಸ್ಯರೇ ಅಧ್ಯಕ್ಷರಾಗುವುದು ಖಚಿತ. ಶಾಸಕ ಎಂ.ವಿ.ವೀರಭದ್ರಯ್ಯ ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು