ಮಧುಗಿರಿ: ಇಲ್ಲಿನ ಪುರಸಭೆ ಅಧ್ಯಕ್ಷರಾಗಿ ತಿಮ್ಮರಾಜು ಹಾಗೂ ಉಪಾಧ್ಯಕ್ಷರಾಗಿ ಕೆ.ಎ.ರಾಧಿಕಾ ಆನಂದ್ ಕೃಷ್ಣ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಯಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ಅವಿರೋಧ ಆಯ್ಕೆಯನ್ನು ಘೋಷಿಸಿದರು.

ಅಧ್ಯಕ್ಷ ಸ್ಥಾನದ ಮೀಸಲಾತಿ ಪರಿಶಿಷ್ಟ ಪಂಗಡ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿತ್ತು.

23 ಸದಸ್ಯ ಬಲದ ಪುರಸಭೆಯಲ್ಲಿ ಕಾಂಗ್ರೆಸ್‌ನ 13, ಜೆಡಿಎಸ್‌ನ 9 ಹಾಗೂ ಒಬ್ಬ ಪಕ್ಷೇತರ ಸದಸ್ಯರಿದ್ದಾರೆ. ಜೆಡಿಎಸ್‌ನಿಂದ ಗೆದ್ದಿದ್ದ ತಿಮ್ಮರಾಜು ಅವರು ವರ್ಷದ ಹಿಂದೆಯೇ ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್‌ನಿಂದ ಪರಿಶಿಷ್ಟ ಪಂಗಡದ ಯಾವುದೇ ಸದಸ್ಯರು ಇರದ ಕಾರಣ ತಿಮ್ಮರಾಜು ಅವರಿಗೆಅಧ್ಯಕ್ಷ ಗಾದಿಯ ಹಾದಿ ಸುಲಭವಾಯಿತು.

ಪಟ್ಟಣದ ಮಾಲಿಮರಿಯಪ್ಪ ರಂಗಮಂದಿರದಲ್ಲಿ ಜಿಎಸ್‌ಬಿ ಅಭಿಮಾನಿ ಬಳಗ, ಕೆ.ಎನ್.ರಾಜಣ್ಣ ಅಭಿಮಾನಿ ಬಳಗದಿಂದ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಸನ್ಮಾನ ಸಮಾರಂಭ ಆಯೋಜಿಸಲಾಗಿತ್ತು.

ಸಂಸದ ಜಿ.ಎಸ್.ಬಸವರಾಜು ಮಾತನಾಡಿ, ‘ಪಟ್ಟಣದ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಸಿದ್ದಾಪುರ ಕೆರೆಗೆ ಹೇಮಾವತಿ ನೀರು ಹರಿಸಲಾಗಿದೆ’ ಎಂದರು.

ಕಾಂಗ್ರೆಸ್ ಮುಖಂಡ ಕೆ.ಎನ್.ರಾಜಣ್ಣ ಮಾತನಾಡಿ, ‘ಅಧ್ಯಕ್ಷರಾಗಿರುವ ತಿಮ್ಮರಾಜು ಅವರು ಜಾತಿ ಮತ್ತು ಹಣ ಬಲವಿಲ್ಲದೆ ಬಡತನದಿಂದ ಬೆಳೆದು ಬಂದಿದ್ದಾರೆ. ಮುಂದೆಯೂ ಬಡವರ ಪರವಾಗಿದ್ದು, ನಿರ್ಗತಿಕರಿಗೆ, ವಸತಿ ರಹಿತರಿಗೆ ಮನೆ ನಿರ್ಮಿಸಲಾಗುವುದು’ ಎಂದರು.

ಕ್ರಿಬೋ ನಿರ್ದೇಶಕ ಆರ್.ರಾಜೇಂದ್ರ, ರಾಜ್ಯ ಸಹಕಾರ ಮಹಾಮಂಡಲ ಅಧ್ಯಕ್ಷ ಎನ್.ಗಂಗಣ್ಣ, ಜಿ.ಪಂ ಸದಸ್ಯ ಜಿ.ಜೆ.ರಾಜಣ್ಣ, ತಾ.ಪಂ ಅಧ್ಯಕ್ಷೆ ಇಂದಿರಾ ದೇನಾನಾಯ್ಕ್, ಸದಸ್ಯ ಸೊಸೈಟಿ ರಾಮಣ್ಣ, ವೆಂಕಟೇಶ್, ಸದಸ್ಯರಾದ ಎಂ.ವಿ.ಗೋವಿಂದರಾಜು, ಎಂ.ಎಸ್.ಚಂದ್ರಶೇಖರ್, ಅಲೀಂ, ಲಾಲಾಪೇಟೆ ಮಂಜುನಾಥ್, ಮಂಜುನಾಥ ಆಚಾರ್, ನಟರಾಜು, ಸುಜಾತ, ಪುಟ್ಟಮ್ಮ, ನಾಗಲತಾ ಲೋಕೇಶ್, ಪಾರ್ವತಮ್ಮ, ಶೋಭಾರಾಣಿ, ಗಾಯಿತ್ರಿ, ಗಿರಜಮ್ಮ, ನಸೀಮಾ ಬಾನು, ಶಾಹಿನಾ ಕೌಸರ್, ಆಸೀಯಾ ಬಾನು ಬ್ಲಾಕ್ ಕಾಂಗ್ರದಸ್ ಅಧ್ಯಕ್ಷರಾದ ಮಲ್ಲಿಕಾರ್ಜುನಯ್ಯ, ರಾಜಗೋಪಾಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್ ಬಾಬು, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.