ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಳಚೆ ಮಿಶ್ರಿತ ನೀರು ಪೂರೈಕೆ

Published 11 ಸೆಪ್ಟೆಂಬರ್ 2023, 13:27 IST
Last Updated 11 ಸೆಪ್ಟೆಂಬರ್ 2023, 13:27 IST
ಅಕ್ಷರ ಗಾತ್ರ

ಮಧುಗಿರಿ: ಪುರಸಭೆ ಇಲಾಖೆ ಸರಬರಾಜು ಮಾಡುವ ನಳದಲ್ಲಿ ಕೊಳಚೆ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ನಿವಾಸಿಗಳು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಚೌಡೇಶ್ವರಿ ಗುಡಿಬೀದಿ ಹಾಗೂ ಸಂಪಿಗೆ ಬೀದಿಯಲ್ಲಿ ಹಲವು ದಿನಗಳಿಂದ ನಳದಲ್ಲಿ ಕೊಳಚೆ ಮಿಶ್ರಿತ ನೀರು ಸರಬರಾಜು ಮಾಡಲಾಗುತ್ತಿದೆ. ಈ ನೀರಿನಲ್ಲಿ ಹುಳು ಕೂಡ ಬರುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. ಇಲ್ಲಿನ ನಿವಾಸಿಗಳು ಶುದ್ಧ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

70ಕ್ಕೂ ಅಧಿಕ ನಳಗಳಲ್ಲಿ ಚರಂಡಿ ನೀರು ಮಿಶ್ರಿತ ನೀರಿನೊಂದಿಗೆ ಹುಳು ಬರುತ್ತಿದೆ. ಹಲವು ದಿನಗಳಿಂದ ಇದೇ ರೀತಿ ಕೊಳಚೆ ಮಿಶ್ರಿತ ನೀರು ಪೂರೈಕೆಯಾಗುತ್ತಿದೆ. ತಕ್ಷಣ ಪುರಸಭೆ ಅಧಿಕಾರಿಗಳು ಗಮನ ಹರಿಸಬೇಕು. ಇಲ್ಲದಿದ್ದರೆ ಪುರಸಭೆ ಮುಂಭಾಗ ಪ್ರತಿಭಟನೆ ಮಾಡುವುದಾಗಿ ನಿವಾಸಿಗಳು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT