ಮಧುಗಿರಿ: ಒಳ ಮೀಸಲಾತಿಯನ್ನು ಪೂರ್ಣ ಪ್ರಮಾಣದಲ್ಲಿ ಜಾರಿಗೊಳಿಸುವಂತೆ ಒತ್ತಾಯಿಸಿ ತಾಲ್ಲೂಕು ದಲಿತ ಪರ ಸಂಘಟನೆ ಪದಾಧಿಕಾರಿಗಳು ಭಾನುವಾರ ನಡೆದ ಬಾಬು ಜಗಜೀವನ ರಾಂ ಜಯಂತಿಯಲ್ಲಿ ಪಾಲ್ಗೊಳ್ಳದೆ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಒಳ ಮೀಸಲಾತಿ ವಿಚಾರವಾಗಿ ರಾಜ್ಯ ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು. ಕಾನೂನು ಬದ್ಧವಾಗಿ ಸಂವಿಧಾನದ ಅಡಿಯಲ್ಲಿ ಪೂರ್ಣ ಪ್ರಮಾಣದ ಒಳ ಮೀಸಲಾತಿ ಜಾರಿ ಆಗಬೇಕು ಎಂದು ಒತ್ತಾಯಿಸಿದರು.

ಒಳ ಮೀಸಲಾತಿಗಾಗಿ ಮೂವತ್ತು ವರ್ಷಗಳಿಂದ ಅನೇಕ ಹೋರಾಟಗಳನ್ನು ಮಾಡಿದ್ದರೂ ಸರ್ಕಾರಗಳು ಬೇಡಿಕೆಯನ್ನು ನಿರ್ಲಕ್ಷ್ಯ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ, ಜೀವಿಕ ಮಂಜುನಾಥ್, ತೊಂಡೋಟಿ ರಾಮಾಂಜಿನಪ್ಪ, ಎಂ.ವೈ ಶಿವಕುಮಾರ್, ದೊಡ್ಡಹೊಸಹಳ್ಳಿ ನರಸಿಂಹಮೂರ್ತಿ, ಎಸ್.ಕೆ.ರಂಗನಾಥ್, ಚಿಕ್ಕಮ್ಮ, ಸಂಜೀವಯ್ಯ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260406-17-1293270646

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.