ಭಾನುವಾರ, 15 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಧುಗಿರಿ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ

Published : 3 ಸೆಪ್ಟೆಂಬರ್ 2024, 14:02 IST
Last Updated : 3 ಸೆಪ್ಟೆಂಬರ್ 2024, 14:02 IST
ಫಾಲೋ ಮಾಡಿ
Comments

ಮಧುಗಿರಿ: ಮಧುಗಿರಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಸೆಪ್ಟೆಂಬರ್‌ 5ರಂದು ಬೆಳಿಗ್ಗೆ 11 ಗಂಟೆಗೆ ಕೊರಟಗೆರೆಯ ಮಾರುತಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಡಿಡಿಪಿಐ ಗಂಗಾಧರ್ ತಿಳಿಸಿದರು.

ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು: ಕೊರಟಗೆರೆ ತಾಲ್ಲೂಕು ಮಾದೇನಹಳ್ಳಿ ತಾಂಡದ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಶಿಕ್ಷಕಿ ಆರ್. ಗುಣಶೀಲ, ಹೊಸಕೋಟೆ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಕಾಂತಪ್ಪ.

ಮಧುಗಿರಿ ತಾಲ್ಲೂಕು ಇಂದಿರಾ ಗ್ರಾಮದ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ಡಿ. ಹೇಮಲತಾ, ದೊಡ್ಡೇರಿ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ವಿಭಾಗದ ಟಿ.ಎನ್. ಲಕ್ಷ್ಮೀಕಾಂತಯ್ಯ, ಬಡವನಹಳ್ಳಿ ಗ್ರಾಮದ ಪ್ರೌಢಶಾಲೆಯ ಎಂ.ಮುಕುಂದರಾಜು, ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಚ್. ಹನುಮಂತರಾಯ. ಪಾವಗಡದ ಹಿರಿಯ ಪ್ರಾಥಮಿಕ ಶಾಲೆಯ ಎ.ದುರ್ಗಮ್ಮ, ಮರಿದಾಸನಹಳ್ಳಿ ಸರ್ಕಾರಿ ಪ್ರೌಢಶಾಲೆಯ ರಾಜಗೋಪಾಲ್.

ಶಿರಾ ತಾಲ್ಲೂಕಿನ ಕೆಂಚಗಾನಹಳ್ಳಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಡಿ.ಎನ್.ಅಶ್ವಿನಿ, ತಾಳಗುಂದ ಹಿರಿಯ ಪ್ರಾಥಮಿಕ ಶಾಲೆಯ ಟಿ.ವಿ.ರೂಪ, ಭುವನಹಳ್ಳಿ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಎಸ್.ಮಂಜುನಾಥ್ ಅವರು ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT