ಗುರುವಾರ , ಜೂಲೈ 9, 2020
26 °C

ಇಲಾಖೆಗಳ ವಿಲೀನಕ್ಕೆ ಚಿಂತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪಾವಗಡ: ಕೆಲವು ಇಲಾಖೆಗಳಲ್ಲಿ ನೌಕರರು ಇದ್ದಾರೆ. ಆದರೆ ಅವರಿಗೆ ಕೆಲಸವೇ ಇಲ್ಲ. ಕೆಲವು ಇಲಾಖೆಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ಆದರೆ ಹೆಚ್ಚು ಕೆಲಸ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಇಲಾಖೆಗಳನ್ನು ಮತ್ತೊಂದು ಇಲಾಖೆಯ ಜತೆ ವಿಲೀನಗೊಳಿಸಲು ಚಿಂತಿಸಲಾಗುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಇಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನೌಕರರ ವೇತನ, ಭತ್ಯೆ ಹಾಗೂ ಆಡಳಿತ ನಿರ್ವಹಣೆಗೆ ರಾಜ್ಯ ಸರ್ಕಾರ ವಾರ್ಷಿಕ ₹ 85 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಇಲಾಖೆಗಳ ವಿಲೀನದಿಂದ ನೌಕರರಿಗೆ ಯಾವುದೇ ತೊಂದರೆ ಆಗುವುದಿಲ್ಲ’ ಎಂದರು.

ತಾಲ್ಲೂಕು ಮಟ್ಟದಲ್ಲಿರುವ ಕೆಲವು ಇಲಾಖೆಗಳನ್ನು ಜಿಲ್ಲಾ, ರಾಜ್ಯ ಮಟ್ಟದಲ್ಲಿ ಮಾತ್ರಕ್ಕೆ ಸೀಮಿತಗೊಳಿಸುವುದು. ಸಣ್ಣ ಪುಟ್ಟದಾದ ಎರಡು–ಮೂರು ಇಲಾಖೆಗಳನ್ನು ವಿಲೀನಗೊಳಿಸಿ ಒಬ್ಬ ಅಧಿಕಾರಿಯನ್ನೇ ನೇಮಕ ಮಾಡುವ ಬಗ್ಗೆ ಆಲೋಚಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.