ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಎಂಎಲ್‌ಸಿ ಸ್ಥಾನಕ್ಕೆ ಮಾದಿಗರು ಆಗ್ರಹ

Published 20 ಜನವರಿ 2024, 5:42 IST
Last Updated 20 ಜನವರಿ 2024, 5:42 IST
ಅಕ್ಷರ ಗಾತ್ರ

ತುಮಕೂರು: ನಿಗಮ, ಮಂಡಳಿಗಳಲ್ಲಿ ಮಾದಿಗ ಸಮುದಾಯಕ್ಕೆ ಉನ್ನತ ಸ್ಥಾನಮಾನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಮಾದಿಗ ಬಳಗದ ಮುಖಂಡರು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್‌ ಅವರಿಗೆ ನಗರದಲ್ಲಿ ಶುಕ್ರವಾರ ಮನವಿ ಸಲ್ಲಿಸಿದರು.

ಜಿಲ್ಲೆಯ ಮಾದಿಗ ಸಮುದಾಯದ ಮುಖಂಡರಿಗೆ ವಿಧಾನ ಪರಿಷತ್‌ ಸದಸ್ಯ ಸ್ಥಾನ ನೀಡಬೇಕು. ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಸಮಿತಿಗಳಿಗೆ ನೇಮಕ ಮಾಡುವಾಗ ಎಡಗೈ ಸಮುದಾಯವನ್ನು ಪರಿಗಣಿಸಬೇಕು ಎಂದು ಮಾದಿಗ ಬಳಗದ ಜಿಲ್ಲಾ ಅಧ್ಯಕ್ಷ ಕೋಡಿಯಾಲ ಮಹದೇವ ಒತ್ತಾಯಿಸಿದರು.

ಜಿಲ್ಲೆಯಲ್ಲಿ 2 ಪರಿಶಿಷ್ಟ ಜಾತಿಯ ಮೀಸಲು ಕ್ಷೇತ್ರಗಳಿದ್ದರೂ ಮಾದಿಗ ಸಮುದಾಯಕ್ಕೆ ಟಿಕೆಟ್‌ ನೀಡಿಲ್ಲ. ಆದರೂ ಈ ಸಮುದಾಯದ ಜನರು ಕಾಂಗ್ರೆಸ್‌ ಜತೆಗೆ ಇದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಲು ಮಾದಿಗರ ಬೇಡಿಕೆಗಳನ್ನು ಈಡೇರಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲಿ ಮಾದಿಗ ಸಮುದಾಯಕ್ಕೆ ಹೆಚ್ಚಿನ ಕ್ಷೇತ್ರಗಳಲ್ಲಿ ಟಿಕೆಟ್‌ ನೀಡಬೇಕು ಎಂದು ಆಗ್ರಹಿಸಿದರು.

ಮಾದಿಗ ಬಳಗದ ಟಿ.ಸಿ.ರಾಮಯ್ಯ, ಗೂಳಹರಿವೆ ನಾಗರಾಜು, ಶ್ರೀನಿವಾಸ್ ಅಯ್ಯನಪಾಳ್ಯ, ಮಧುಗಿರಿಯ ರಂಗಶಾಮಯ್ಯ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT