ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಎಂಎಲ್‌ಸಿ ಸ್ಥಾನಕ್ಕೆ ಮಡಿವಾಳರು ಒತ್ತಾಯ

Published 25 ಮೇ 2024, 4:49 IST
Last Updated 25 ಮೇ 2024, 4:49 IST
ಅಕ್ಷರ ಗಾತ್ರ

ತುಮಕೂರು: ಕಾಂಗ್ರೆಸ್‌ ವತಿಯಿಂದ ಮಡಿವಾಳ ಸಮುದಾಯದ ಮುಖಂಡ ಕೆ.ವಿ.ಅಮರ್‌ನಾಥ್‌ ಅವರಿಗೆ ವಿಧಾನ ಪರಿಷತ್‌ ಸದಸ್ಯ ಸ್ಥಾನ ನೀಡುವಂತೆ ಜಿಲ್ಲಾ ಮಡಿವಾಳ ಸಂಘ ಒತ್ತಾಯಿಸಿದೆ.

ಕಾಂಗ್ರೆಸ್‌ ಪರವಾಗಿ ಹಲವು ರಾಜ್ಯ, ರಾಷ್ಟ್ರ ಮಟ್ಟದ ಸಂಘಟನಾ ಕಾರ್ಯಕ್ರಮ ಆಯೋಜಿಸಿದ್ದಾರೆ. ಸಮುದಾಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಪಕ್ಷಕ್ಕೆ ನಿಷ್ಠಾವಂತರಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಎಂಎಲ್‌ಸಿ ಮಾಡುವ ಮೂಲಕ 15 ಲಕ್ಷಕ್ಕೂ ಹೆಚ್ಚಿರುವ ಮಡಿವಾಳ ಸಮುದಾಯಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸಂಘದ ಅಧ್ಯಕ್ಷ ಲಕ್ಷ್ಮಣ್‌, ಪ್ರಧಾನ ಕಾರ್ಯದರ್ಶಿ ಬಿ.ವೆಂಕಟರಾಮಯ್ಯ ಮನವಿ ಮಾಡಿದ್ದಾರೆ.

ಅಮರ್‌ನಾಥ್‌ 30 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಸಮುದಾಯದ ಮುಂಚೂಣಿ ನಾಯಕರಾಗಿದ್ದಾರೆ. ಸರ್ವರ ಸೇವೆ ಮಾಡಲು ಅನುವು ಮಾಡಿಕೊಡುವಂತೆ ಕೇಳಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT