ಮಧುಗಿರಿ: ಕೇಂದ್ರ ಸರ್ಕಾರ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿರುವುದನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ರೈತರ ಪಂಪ್ಸೆಟ್ಗಳಿಗೆ ಸ್ಮಾರ್ಟ್ ಮೀಟರ್ ಅಳವಡಿಕೆಯನ್ನು ರಾಜ್ಯ ಸರ್ಕಾರ ಕೂಡಲೇ ಕೈ ಬಿಡುವ ಮೂಲಕ ರೈತರ ಪರ ನಿಲ್ಲಬೇಕು ಎಂದು ಜಿಲ್ಲಾ ರೈತ ಸಂಘದ ಅಧ್ಯಕ್ಷ ಎ. ಗೋವಿಂದರಾಜು ಆಗ್ರಹಿಸಿದರು.

ರೈತಸಂಘದಿಂದ ಟೌನ್ಹಾಲ್ನಿಂದ ತಾಲ್ಲೂಕು ಕಚೇರಿವರೆಗೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ರೈತರಿಗೆ ಅಗತ್ಯವಾದ ವಿದ್ಯುತ್ತನ್ನು ಸರ್ಕಾರವೇ ಒದಗಿಸಬೇಕು. ಹಗಲು ದಿನಕ್ಕೆ 7ಗಂಟೆ ಸಮರ್ಪಕವಾಗಿ ಸರಬರಾಜು ಆಗಬೇಕು ಎಂದರು.

ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರೇಗೌಡನಹಳ್ಳಿ ಶಂಕರಪ್ಪ ಮಾತನಾಡಿ, ತಾಲ್ಲೂಕಿನ ಹತ್ತಿ ಬೆಳಗಾರರಿಗೆ ಏಜೆಂಟರಿಂದ ಬರಬೇಕಾದ ಬಾಕಿ ಸಂದಾಯವಾಗಬೇಕು. ಹತ್ತಿ ಕಾಳಿನ ತೂಕ, ಬೆಲೆಯಲ್ಲಿ ಮೋಸ ಮಾಡಿ ರೈತರಿಗೆ ಕಿರುಕುಳ ಕೊಡುವ ಏಜೆಂಟರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ರೈತ ಸಂಘದ ಅಧ್ಯಕ್ಷ ಲಕ್ಷ್ಮಿನಾರಾಯಣ ರೆಡ್ಡಿ ಮಾತನಾಡಿ, ಜಿಲ್ಲೆಯಲ್ಲಿ ಹುಣಸೆ ಅಭಿವೃದ್ಧಿ ಮಂಡಳಿ ಸ್ಥಾಪನೆಯಾಗಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಶ್ರೀನಿವಾಸ್ ಏ. 21ರಂದು ಅಧಿಕಾರಿಗಳನ್ನು ಕರೆಸಿ ಸಭೆ ನಡೆಸುವುದಾಗಿ ಭರವಸೆ ನೀಡಿದರು.

ರೈತ ಮುಖಂಡ ದೊಡ್ಡ ಮಾಳಯ್ಯ, ನಾದುರೂ ಕೆಂಚಪ್ಪ, ನಾಗರತ್ನಮ್ಮ ಚಿಕ್ಕ ಬೋರೇಗೌಡ, ತಾಲ್ಲೂಕು ರೈತ ಸಂಘದ ಅಧ್ಯಕ್ಷ ರಾಜಶೇಖರ್, ಲಕ್ಷಣ ಗೌಡ, ನರಸಿಂಹಮೂರ್ತಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-17-941334339

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.