ತುಮಕೂರು: ಮಹಾಶಿವರಾತ್ರಿ ಪ್ರಯುಕ್ತ ನಗರ ಸೇರಿದಂತೆ ಜಿಲ್ಲೆಯಾದ್ಯಂತ ವಿಶೇಷ ಕಾರ್ಯಕ್ರಮಗಳು ನಡೆದವು. ಎಲ್ಲೆಡೆ ಶಿವ ನಾಮ ಸ್ಮರಣೆ ನಡೆಯಿತು.

ವಿವಿಧ ದೇವಸ್ಥಾನಗಳಲ್ಲಿ ಬೆಳಿಗ್ಗೆಯಿಂದಲೇ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ದೇಗುಲಗಳಲ್ಲಿ ಶಿವರಾತ್ರಿಯ ಆಚರಣೆಗೆ ಸಿದ್ಧತೆಗಳು ಜೋರಾಗಿಯೇ ನಡೆದಿದ್ದವು. ತಳಿರು, ತೋರಣ, ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಶಿವನ ಭಕ್ತರು ಉಪವಾಸವಿದ್ದು, ಜಾಗರಣೆ ಮಾಡಿದರು. ದೇವಸ್ಥಾನಗಳಲ್ಲಿ ರಾತ್ರಿ ಜಾಗರಣೆ, ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು.

ಅಭಿಷೇಕ, ಜಾಗರಣೆ, ವಿಶೇಷ ಪೂಜೆ, ಹೋಮಗಳು, ಮಹಾನ್ಯಾಸ ಪೂರ್ವಕ ರುದ್ರಾಭಿಷೇಕ, ಬಿಲ್ವಾರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳ ಮೂಲಕ ಶಿವ ನಾಮ ಜಪಿಸಲಾಯಿತು.

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ 21 ಜ್ಯೋತಿರ್ಲಿಂಗಗಳ ರಥಯಾತ್ರೆ ನಡೆಯಿತು. ಭದ್ರಮ್ಮ ಛತ್ರ ವೃತ್ತದ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ ವೀರಶೈವ ಸಹಕಾರ ಬ್ಯಾಂಕ್ ಅಧ್ಯಕ್ಷ ಟಿ.ಜೆ.ರುದ್ರಪ್ಪ ರಥಯಾತ್ರೆಗೆ ಚಾಲನೆ ನೀಡಿದರು. ನಗರದ ರಸ್ತೆಗಳಲ್ಲಿ ರಥಯಾತ್ರೆ ಸಾಗಿತು.

ಪಶುಪತಿನಾಥ ದೇವಾಲಯದಲ್ಲಿ ಸಾಮೂಹಿಕ ಕ್ಷೀರಾಭಿಷೇಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಿಗ್ಗೆ 8.30 ಗಂಟೆಯಿಂದ ಸಾರ್ವಜನಿಕರಿಗೆ ಕ್ಷೀರಾಭಿಷೇಕ ಮಾಡಲು ಅವಕಾಶ ನೀಡಲಾಗಿತ್ತು.

ಮಹಾಲಕ್ಷ್ಮಿ ನಗರದ ವೆಂಕಟೇಶ್ವರ ಸ್ವಾಮಿ ದೇವಸ್ಥಾನ, ನಗರದ ಬನಶಂಕರಿ ಬಸವೇಶ್ವರ ದೇವಸ್ಥಾನ, ಕ್ಯಾತ್ಸಂದ್ರದ ಚಂದ್ರಮೌಳೀಶ್ವರ ಸ್ವಾಮಿ ದೇವಾಲಯ, ಶಿವಗಣಪತಿ ದೇವಸ್ಥಾನ ಸೇರಿದಂತೆ ವಿವಿಧ ಬಡಾವಣೆಗಳಲ್ಲಿರುವ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲಾಯಿತು. ಹನುಮಂತಪುರ ರಸ್ತೆಯಲ್ಲಿರುವ ಸರಪಳಿ ಸ್ವಾಮಿ ಮಠದಲ್ಲಿನ ದ್ವಾದಶ ಜ್ಯೋರ್ತಿಲಿಂಗಗಳಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ನಗರದ ಹೊರಪೇಟೆ ರಸ್ತೆಯ ಕಾಶಿವಿಶ್ವೇಶ್ವರ ಸ್ವಾಮಿ ಮಂದಿರ, ಕರಿ ಬಸವೇಶ್ವರ ಸ್ವಾಮಿ ಮಠ, ಹಿರೇಮಠದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ, ಅರಳೇಪೇಟೆ ಬಸವೇಶ್ವರಸ್ವಾಮಿ, ಕೋಡಿ ಬಸವೇಶ್ವರ ಸ್ವಾಮಿ, ಚಿಕ್ಕಪೇಟೆ ಗಂಗಾಧರೇಶ್ವರ ಸ್ವಾಮಿ, ಬನಶಂಕರಿ ಬಳಿ ಇರುವ ಈಶ್ವರನ ಪ್ರತಿಮೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಎಲ್ಲೆಡೆ ಪೂಜೆ, ಅಭಿಷೇಕ ನೆರವೇರಿದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.