ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ತುರುವೇಕೆರೆ: ಮಹಾಲಕ್ಷ್ಮಿ ದೇಗುಲ ಜೀರ್ಣೋದ್ಧಾರ, ವಿಮಾನ ಗೋಪುರ ಲೋಕಾರ್ಪಣೆ

Published 29 ಫೆಬ್ರುವರಿ 2024, 14:11 IST
Last Updated 29 ಫೆಬ್ರುವರಿ 2024, 14:11 IST
ಅಕ್ಷರ ಗಾತ್ರ

ತುರುವೇಕೆರೆ: ದೇಶದ ಬೆನ್ನೆಲುಬಾಗಿರುವ ರೈತರ ಬದುಕು ಹಸನಾದರೆ ಮಾತ್ರ ರಾಷ್ಟ್ರವೇ ಸಮೃದ್ಧವಾಗುತ್ತದೆ ಎಂದು ಮೇಲುಕೋಟೆಯ ರಾಮಾನುಜಾಚಾರ್ಯ ಮಹಾಸಂಸ್ಥಾನದ ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ತಿಳಿಸಿದರು.

ಪಟ್ಟಣದ ಮಹಾಲಕ್ಷ್ಮಿ ದೇವಾಲಯದ ಜೀರ್ಣೋದ್ದಾರ ಮತ್ತು ನೂತನ ವಿಮಾನ ಗೋಪುರ ಕುಂಭಾಭಿಷೇಕ ಹಾಗೂ ಲೋಕಾರ್ಪಣೆ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ಕಷ್ಟಪಟ್ಟು ಬೆಳೆ ಬೆಳೆದು ನೀಡಿದರೆ ಮಾತ್ರ ಜನರ ಹಸಿವು ನೀಗಿಸಲು ಸಾಧ್ಯ ಎಂದು ಹೇಳಿದರು.

ಧರ್ಮಸ್ಥಳ ಟ್ರಸ್ಟ್‌ ಉಪಾಧ್ಯಕ್ಷ ಡಿ.ಸುರೇಂದ್ರಕುಮಾರ್ ಮಾತನಾಡಿ, ‘ಪುರಾತನ ದೇವಾಲಯಗಳನ್ನು ಟ್ರಸ್ಟ್ ಹಾಗೂ ಸರ್ಕಾರದ ಪುರಾತತ್ವ ಇಲಾಖೆಯ ಸಹಯೋಗದಲ್ಲಿ 200ಕ್ಕೂ ಹೆಚ್ಚು ದೇವಾಲಯಗಳನ್ನು ಜೀರ್ಣೋದ್ಧಾರ ಮಾಡಲಾಗಿದೆ. ಯಾವುದೇ ಪುರಾತನ ದೇವಾಲಯದ ಮೂಲ ಸ್ವರೂಪ ಬದಲಾಯಿಸದೆ ಯಥಾಸ್ಥಿತಿ ಕಾಪಾಡಿಕೊಂಡು ಸಂರಕ್ಷಣೆ ಮಾಡುವುದು ನಮ್ಮ ಉದ್ದೇಶ’ ಎಂದರು.

ಕಾರ್ಯಕ್ರಮದಲ್ಲಿ ಸ್ವಾಮೀಜಿ ಹಾಗೂ ಡಿ.ಸುರೇಂದ್ರಕುಮಾರ್ ಅವರನ್ನು ಅಭಿನಂದಿಸಲಾಯಿತು.

ಈ ಸಮಾರಂಭದಲ್ಲಿ ಟ್ರಸ್ಟ್‌ ಸಲಹೆಗಾರ ಡಾ.ಸಿ.ಎಸ್.ಕೇದಾರ್, ಪುರಾತತ್ವ ಸಂಗ್ರಹಾಲಯಗಳ ಮತ್ತು ಪರಂಪರೆ ಇಲಾಖೆ ಆಯುಕ್ತರಾದ ಎ.ದೇವರಾಜು, ತಾಲ್ಲೂಕು ದಂಡಾಧಿಕಾರಿ ವೈ.ಎಂ.ರೇಣುಕುಮಾರ್, ಬೇಟರಾಯ ಸ್ವಾಮಿ ದೇವಾಲಯದ ಸಮಿತಿ ಅಧ್ಯಕ್ಷ ಶ್ರೀಧರ್, ಸೂರ್ಯನಾರಾಯಣ ಪಂಡಿತ್, ಶಿಕ್ಷಕ ಚೈತನ್ಯ, ಸುಷ್ಮ ಮತ್ತು ಭಕ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT