ಶುಕ್ರವಾರ, ಫೆಬ್ರವರಿ 26, 2021
32 °C
ವಿಧಾನ ಪರಿಷತ್‌ ಸದಸ್ಯ ಚಿದಾನಂದ ಗೌಡ ಸಲಹೆ

ರಾಷ್ಟ್ರೀಯ ಶಿಕ್ಷಣ ನೀತಿ ಯಶಸ್ವಿಗೊಳಿಸಿ: ಚಿದಾನಂದ ಗೌಡ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದರಿಂದಾಗಿ ಶಿಕ್ಷಕರ ಸಮಸ್ಯೆಯು ಬಗೆಹರಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ತಿಳಿಸಿದರು.

ನಗರದ ಒಕ್ಕಲಿಗರ ಭವನದಲ್ಲಿ ಶಿಕ್ಷಕರ ಸಂಘದಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಿಪಟೂರು ಭಾಗದಿಂದ ಅತ್ಯಂತ ಹೆಚ್ಚು ಮತಗಳನ್ನು ನನಗೆ ನೀಡಿರುವುದು ಸಂತೋಷದ ವಿಷಯ. ಚುನಾವಣಾ ಪ್ರಣಾಳಿಕೆಯಲ್ಲಿರುವ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು. ಜೊತೆಗೆ ರಚನಾತ್ಮಕ ಕೆಲಸಗಳನ್ನು ಕೈಗೆತ್ತಿಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿ ತಾರ್ಕಿಕ ಅಂತ್ಯವನ್ನು ಕಾಣಬಯಸುತ್ತೇನೆ. ಎಲ್ಲಾ ಶಿಕ್ಷಕರ, ಉಪನ್ಯಾಸಕರ ಸಮಸ್ಯೆಗಳು ನನಗೆ ತಿಳಿದಿದೆ. ಸರ್ಕಾರದ ಗಮನಕ್ಕೆ ತಂದು ಗಮನಾರ್ಹವಾದ ಸಮಸ್ಯೆಗಳ ಪರಹಾರಕ್ಕೆ ಸೂತ್ರ ತಯಾರಿಸಿ, ಶಿಕ್ಷಕ ವೃಂದಕ್ಕೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ರಾಜು ಮಾತನಾಡಿ, ತಾಲ್ಲೂಕಿನ ಎಲ್ಲರ ಪರಿಶ್ರಮದಿಂದ ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಲು ಸಾಧ್ಯವಾಗಿದೆ. ಅತಿಥಿ ಉಪನ್ಯಾಸಕರನ್ನು ಕೂಡಲೇ ಪೂರ್ಣಪ್ರಮಾಣದಲ್ಲಿ ನೇಮಕ ಮಾಡಿಕೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ಮಾತನಾಡಿ, ಶಿಕ್ಷಕರು ಮುಂದಿನ ಪೀಳಿಗೆಯನ್ನು ತಯಾರಿಸುವ ಶಿಲ್ಪಿಗಳು. ಅವರ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಗಮನಿಸಿಕೊಂಡು ಸಕಾಲಕ್ಕೆ ಅಗತ್ಯವಿರುವ ಹೊಸ ನೀತಿನಿಯಮಗಳನ್ನು ತಂದು ಶಿಕ್ಷಕರಿಗೆ ಹಲವಾರು ಸವಲತ್ತುಗಳನ್ನು ಒದಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಪಟ್ಟಾಭಿರಾಮ, ಉಪನ್ಯಾಸಕ ಡಾ.ಎಲ್.ಎಂ. ವೆಂಕಟೇಶ್, ಶಿವಣ್ಣ, ಬಿ.ಸಿ. ರವಿಶಂಕರ್, ಸುಧಾ, ಶ್ರೀನಿವಾಸಮೂರ್ತಿ ಹಾಜರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು