ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಲೇರಿಯಾ ಶೂನ್ಯ ತಲುಪುವ ಗುರಿ

ಮಲೇರಿಯಾ ಜಾಗೃತಿ ಜಾಥಾ
Published 1 ಮೇ 2024, 6:17 IST
Last Updated 1 ಮೇ 2024, 6:17 IST
ಅಕ್ಷರ ಗಾತ್ರ

ತುಮಕೂರು: ವಿಶ್ವ ಮಲೇರಿಯಾ ದಿನಾಚರಣೆ ಪ್ರಯುಕ್ತ ನಗರದಲ್ಲಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

ಬಿಜಿಎಸ್‌ ವೃತ್ತದ ಬಳಿ ಶುರುವಾದ ಜಾಥಾ ಅಶೋಕ ರಸ್ತೆ, ಸ್ವಾತಂತ್ರ್ಯ ಚೌಕ, ಜಿಲ್ಲಾಧಿಕಾರಿ ಕಚೇರಿ ಮುಖಾಂತರ ಡಿಎಚ್‌ಒ ಕಚೇರಿ ತಲುಪಿತು. ‘ಮಲೇರಿಯಾ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿ’, ‘ಜತೆಗೂಡಿ ಮುನ್ನಡೆಯೋಣ ಮಲೇರಿಯಾ ನಿವಾರಣೆ ಮಾಡೋಣ’, ‘ಶೂನ್ಯ ಮಲೇರಿಯಾ ಗುರಿ ತಲುಪೋಣ’ ಎಂಬ ನಾಮಫಲಕ ಹಿಡಿದು ಸಾಗಿದರು. ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಡಿಎಚ್‌ಒ ಡಾ.ಡಿ.ಎನ್‌.ಮಂಜುನಾಥ್‌ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ‘ಮಲೇರಿಯಾ ರೋಗ ಲಕ್ಷಣ ಕಂಡು ಬಂದ ಕೂಡಲೇ ಸೂಕ್ತ ಚಿಕಿತ್ಸೆ ಪಡೆದರೆ ಬೇಗ ಗುಣಮುಖರಾಗಬಹುದು. ಚಳಿ– ನಡುಕ, ಜ್ವರ ಮಲೇರಿಯಾ ರೋಗದ ಪ್ರಮುಖ ಲಕ್ಷಣಗಳು’ ಎಂದು ಹೇಳಿದರು.

ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಬಿ.ಎಂ.ಚಂದ್ರಶೇಖರ್‌, ‘ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು. ಮಲೇರಿಯಾ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೊಳ್ಳೆ ಪರದೆ ಬಳಸಬೇಕು’ ಎಂದು ಸಲಹೆ ಮಾಡಿದರು.

ಕೀಟಶಾಸ್ತ್ರಜ್ಞ ಸಿದ್ದಪ್ಪಸ್ವಾಮಿ, ಆರೋಗ್ಯ ಮೇಲ್ವಿಚಾರಣಾಧಿಕಾರಿ ಲಕ್ಷ್ಮಿಕಾಂತಪ್ಪ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನಾಗೇಶ್, ಸತೀಶ್, ಮಂಜೇಗೌಡ, ಚಂದ್ರಶೇಖರ್‌ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT